ಜಿಲ್ಲೆ

ಬಾಸ್ಕಟ್ ಬಾಲ್ ಪಂದ್ಯದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಬಾಸ್ಕೆಟ್ ಬಾಲ್ ಪಂದ್ಯಾವಳಿಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುವ ಸಂತ ಮೇರಿ ಆಂಗ್ಲ ಮಾದ್ಯಮ ಶಾಲೆಯ ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳೊಂದಿಗೆ ದೈಹಿಕ ಶಿಕ್ಷಣ ಶಿಕ್ಷಕ ಬಿ.ಎಂ.ಚಂದ್ರಶೇಖರ್ ಇದ್ದರು.

ಸುಂಟಿಕೊಪ್ಪ: ಇಲ್ಲಿನ ಸಂತ ಮೇರಿ ಆಂಗ್ಲ ಮಾಧ್ಯಮ ಶಾಲೆಯ ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳು ಬಾಸ್ಕೆಟ್‌ಬಾಲ್ ಪಂದ್ಯಾವಳಿಯಲ್ಲಿ ತಾಲೂಕು ಮಟ್ಟದಲ್ಲಿ ಜಯಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ.


ಕುಶಾಲನರ ತಾಲೂಕಿನ ಕೂಡಿಗೆ ಮುರಾರ್ಜಿ ದೇಸಾಯಿ ಶಾಲಾ ಮೈದಾನದಲ್ಲಿ ನಡೆದ ತಾಲೂಕು ಮಟ್ಟದ ಬಾಸ್ಕೆಟ್ ಬಾಲ್ ಪಂದ್ಯಾವಳಿಯು ಸೋಮವಾರ ನಡೆದ ಪ್ರಾಥಮಿಕ ವಿಭಾಗದ ಬಾಲಕರ ಬಾಸ್ಕೆಟ್ ಬಾಲ್ ಫೈನಲ್ ಪಂದ್ಯದಲ್ಲಿ ಕೂಡಿಗೆ ಮುರಾರ್ಜಿ ದೇಸಾಯಿ ಪ್ರಾಥಮಿಕ ಶಾಲೆಯನ್ನು ಸುಂಟಿಕೊಪ್ಪ ಸಂತಮೇರಿ ತಂಡವು 10-2 ಪಾಯಿಂಟ್‌ಗಳಿಂದ ಸೋಲಿಸುವ ಮೂಲಕ ಪ್ರಶಸ್ತಿಯನ್ನು ಮುಡಿಗೇರಿಸುವ ಮೂಲಕ ಜಿಲ್ಲಾ ಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ.


ಪ್ರೌಢಶಾಲಾ ಬಾಲಕರ ಬಾಸ್ಕೆಟ್ ಬಾಲ್ ಪಂದ್ಯಾವಳಿಯ ಫೈನಲ್ ಪಂದ್ಯದಲ್ಲಿ ಕೂಡಿಗೆಯ ಮುರಾರ್ಜಿ ದೇಸಾಯಿ ವಸತಿ ಶಾಲೆಯ ವಿರುದ್ಧ 14-06 ಅಂಕಗಳಿಗೆ ಸೋಲಿಸಿ ಪ್ರಥಮ ಸ್ಥಾನ ಪಡೆಯುವುದರ ಮೂಲಕ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.


ಇದೇ ತಿಂಗಳು ಮಡಿಕೇರಿಯಲ್ಲಿ ಜಿಲ್ಲಾ ಮಟ್ಟದ ಪಂದ್ಯಾವಳಿಯಲ್ಲಿ ಈ ತಂಡಗಳು ಪಾಲ್ಗೊಳ್ಳಲಿವೆ. ಸಂಸ್ಥೆಯ ಮುಖ್ಯಸ್ಥರಾದ ರೆ.ಫಾ.ಅರುಳ್ ಸೆಲ್ವಕುಮಾರ್, ಮುಖ್ಯ ಶಿಕ್ಷಕ ಸೇಲ್ವರಾಜ್, ದೈಹಿಕ ಶಿಕ್ಷಣ ಶಿಕ್ಷಕ ಬಿ.ಎಂ.ಚಂದ್ರಶೇಖರ್ ಮತ್ತು ಸಹ ಶಿಕ್ಷಕರು ಇದ್ದರು.