ಜಿಲ್ಲೆ

ಬಿ.ಎಸ್.ಯಡಿಯೂರಪ್ಪ ರಾಜ್ಯದ ಪ್ರಶ್ನಾತೀತ ನಾಯಕ

ಚಿಕ್ಕಮಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ರಾಜ್ಯದ ಹಾಗೂ ವೀರಶೈವ ಲಿಂಗಾಯತ ಸಮಾಜದ ಪ್ರಶ್ನಾತೀತ ನಾಯಕರು. ಈ ನಾಡಿನಲ್ಲಿ ವೀರಶೈವ ಲಿಂಗಾಯತರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಹೀಗಾಗಿಯೇ ಮುಂದಿನ ಚುನಾವಣೆಗಳಲ್ಲಿ ಅನುಕೂಲವಾಗಲಿ ಎಂಬ ಉz್ದೆÃಶದಿಂದ ಬಿ.ವೈ.ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಮಾಡಲಾಗಿದೆ. ಈ ಬಗ್ಗೆ ಯಾವುದೇ ಅಪಸ್ವರವಿದ್ದರೂ ಪಕ್ಷದ ಆಂತರಿಕ ವೇದಿಕೆಯಲ್ಲಿ ಚರ್ಚಿಸಿ ಪರಿಹರಿಸಿಕೊಳ್ಳಬೇಕು ಎಂದು ರಂಭಾಪುರಿ ಪೀಠದ ಶ್ರೀ ಪ್ರಸನ್ನ ರೇಣುಕಾ ಡಾ.ವೀರಸೋಮೇಶ್ವರ ರಾಜಕೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರು ಸಲಹೆ ನೀಡಿದರು.

ಬಾಳೆಹೊನ್ನೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀಗಳು, ಬಿ.ವೈ.ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾಗಿರುವುದಕ್ಕೆ ಕೆಲವರು ಅಪಸ್ವರ ಎತ್ತುತ್ತಿದ್ದಾರೆ. ಬಹಿರಂಗವಾಗಿಯೂ ಕೆಲವರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಇದರ ಬದಲು ಪಕ್ಷದ ಆಂತರಿಕ ವೇದಿಕೆಯಲ್ಲಿ ಚರ್ಚಿಸಿ ಸಮಸ್ಯೆ ಪರಿಹರಿಸಿಕೊಳ್ಳಲು ಮುಂದಾಗಬೇಕು ಎಂದು ಹೇಳಿದರು.

ಪಕ್ಷವೆಂದಾಗ ಎಲ್ಲ ಸದಸ್ಯರೂ ಒಟ್ಟಾಗಿ ಕೆಲಸ ಮಾಡಬೇಕು. ಏನೇ ಸಮಸ್ಯೆಗಳಿದ್ದರೂ ಅವುಗಳನ್ನು ಪಕ್ಷದ ಆಂತರಿಕ ವೇದಿಕೆಯಲ್ಲಿ ಚರ್ಚಿಸಿ ಬಗೆಹರಿಸಿಕೊಳ್ಳಬೇಕು. ಆಗ ಭವಿಷ್ಯದಲ್ಲಿ ಅಧಿಕಾರ ಹಿಡಿಯಲು ಒಳ್ಳೆಯದಾಗುತ್ತದೆ ಎಂದು ಸಲಹೆ ನೀಡಿದರು.

ರಾಜ್ಯದ ಕಾಂಗ್ರೆಸ್ ಸರ್ಕಾರಕ್ಕೂ ಸಲಹೆ ನೀಡಿದ ರಂಭಾಪುರಿ ಶ್ರೀಗಳು, ರಾಜ್ಯ ಸರ್ಕಾರಕ್ಕೆ ಸಮರ್ಥವಾದ ವಿರೋಧ ಪಕ್ಷದ ಅವಶ್ಯಕತೆಯಿದೆ. ವಿರೋಧ ಪಕ್ಷದಲ್ಲಿರುವ ಒಡಕಿನ ರ್ದುಲಾಭ ಪಡೆದು ಆಡಳಿತ ಪಕ್ಷ ಲಾಭ ಪಡೆದುಕೊಳ್ಳುವುದು ಹೆಚ್ಚುತ್ತಿದೆ. ಹೀಗಾಗಿಯೇ ಬಹುಮತಪಡೆದು ಸರ್ಕಾರ ರಚನೆಯಾಗಿದ್ದರೂ ಆಡಳಿತ ಪಕ್ಷದ ಮೇಲೆ ಅದೇ ಪಕ್ಷದ ಶಾಸಕರು ಅಸಮಾಧಾನಗೊಂಡಿದ್ದಾರೆ ಎಂದು ಹೇಳಿದರು.

ಪಂಚ ಗ್ಯಾರಂಟಿ ಯೋಜನೆಗಳು ಸರ್ಕಾರದ ಬೊಕ್ಕಸವನ್ನು ಖಾಲಿ ಮಾಡಿವೆ. ಯಾವುದೇ ಶಾಸಕರು ಕ್ಷೇತ್ರದಲ್ಲಿ ಅಭಿವೃದ್ಧಿ ಮಾಡಲು ಆಗುತ್ತಿಲ್ಲ. ಅಭಿವೃದ್ಧಿ ಇಲ್ಲದೆ ಜನರ ಮುಂದೆ ಹೋಗುವುದು ಹೇಗೆ ಎಂಬ ಪ್ರಶ್ನೆ ಅವರನ್ನು ಕಾಡುತ್ತಿದೆ. ನಿನ್ನೆ ದಿನ ಕಾಂಗ್ರೆಸ್ ಪಕ್ಷದ ಶಾಸಕರ ಸಭೆ ನಡೆದಿದೆ. ಈ ವಿಚಾರದಲ್ಲಿ ಏನು ನಿರ್ಧಾರ ತೆಗೆದುಕೊಂಡಿದ್ದಾರೆಯೋ ಗೊತ್ತಿಲ್ಲ. ಬಹುಶಃ ಎಲ್ಲ ಕ್ಷೇತ್ರದ ಶಾಸಕರಿಗೆ ಅನುದಾನ ಬಿಡುಗಡೆ ಮಾಡಿರುವ ಸಾಧ್ಯತೆ ಇದೆ. ಸರ್ವ ಜನಾಂಗದ ಶಾಂತಿಯ ತೋಟ ಖ್ಯಾತಿ ಈ ರಾಜ್ಯಕ್ಕೆ ಇದೆ. ಅದನ್ನ ಉಳಿಸಿಕೊಂಡು ಬೆಳೆಸಿಕೊಂಡು ಹೋಗಲಿ ಎಂದು ಹೇಳಿದರು.