ಜಿಲ್ಲೆ

ಬಿಆರ್‌ಟಿಎಸ್ ಚಿಗರಿ ಬಸ್‌ನಲ್ಲಿ ಬೆಂಕಿ

ಧಾರವಾಡ: ಹುಬ್ಬಳ್ಳಿ- ಧಾರವಾಡ ಮಧ್ಯೆ ಸಂಚರಿಸುವ ಬಿಆರ್‌ಟಿಎಸ್ ಸಂಸ್ಥೆಯ ಚಿಗರಿ ಬಸ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಘಟನೆ ನಗರದ ಜ್ಯುಬಿಲಿ ವೃತ್ತದಲ್ಲಿ ಶುಕ್ರವಾರ ಸಂಜೆ ನಡೆದಿದೆ. ಎಸಿ ವ್ಯವಸ್ಥೆ ಇರುವ ಬಸ್‌ನ ಹಿಂಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಸಾರ್ವಜನಿಕರು ಬೆಂಕಿ ನೋಡಿ ಚಾಲಕನಿಗೆ ತಿಳಿಸಿದ್ದಾರೆ. ಅಲ್ಲದೆ, ಅಗ್ನಿಶಾಮಕ ದಳಕ್ಕೆ ಕರೆ ಮಾಡಿ ತಿಳಿಸಿದ್ದಾರೆ. ಚಾಲಕ ಕೂಡಲೇ ಬಸ್ ನಿಲ್ಲಿಸಿದಾಗ ಪ್ರಯಾಣಿಕರು ಇಳಿದು ಓಡಿದ್ದಾರೆ. ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.