ಜಿಲ್ಲೆ

ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ

ಸುಂಟಿಕೊಪ್ಪ: ಉಗ್ರನ ಪರ ಹೇಳಿಕೆ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಹೇಳಿಕೆಯನ್ನು ಖಂಡಿಸಿ ಸುಂಟಿಕೊಪ್ಪ ಬಿಜೆಪಿಯಿಂದ ಭಾನುವಾರ ಪ್ರತಿಭಟನೆ ನಡೆಸಲಾಯಿತು.

ಕನ್ನಡ ವೃತ್ತದಲ್ಲಿ ನಡೆದ ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಬಿಜೆಪಿ ಮುಖಂಡ ಡಿ.ನರಸಿಂಹ, ಕುಕ್ಕರ್ ಬಾಂಬ್ ಸ್ಫೋಟಿಸಿದ ಭಯೋತದ್ಪಾದಕ ಶಾರಿಕ್‌ನನ್ನು ಬೆಂಬಲಿಸಿ ಮಾತನಾಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಮಾನಸಿಕ ಸ್ಥಿತಿಮಿತಿ ಕಳೆದುಕೊಂಡಿದ್ದಾರೆ. ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕೂಡಲೇ ಡಿಕೆಶಿಯವರನ್ನು ಪಕ್ಷದಿಂದ ವಜಾಮಾಡಬೇಕೆಂದು ಆಗ್ರಹಿಸಿದರು.


ಹಾಗೆಯೇ ನಮ್ಮ ದೇಶದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಜಾಗತಿಕ ಭಯೋತ್ಪಾದಕ ಒಸಬಾಬಿನ್ ಲಾಡೆನ್‌ಗೆ ಹೋಲಿಸಿದ ಪಾಕಿಸ್ತಾನ ವಿದೇಶಾಂಗ ಸಚಿವ ಬಿಲಾವಲ್‌ಭುಟ್ಟೋರಿಂದ ಭಾರತೀಯರು ಪಾಠ ಕಲಿಯಬೇಕಾಗಿಲ್ಲ. ಕತ್ತೆ, ಕುರಿ, ಕೋಳಿ ಮಾರಿ ಜೀವಿಸುವ ಪಾಕಿಸ್ತಾನದವರಿಗೆ ನಮ್ಮ ದೇಶದ ವಿರುದ್ಧ ಮಾತನಾಡುವ ನೈತಿಕತೆ ಇಲ್ಲ ಎಂದರು.
ಈ ಪ್ರತಿಭಟನೆಯಲ್ಲಿ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಬಿ.ಕೆ.ಪ್ರಶಾಂತ್, ಗ್ರಾ.ಪಂ.ಸದಸ್ಯ ಪಿ.ಆರ್.ಸುನಿಲ್ ಕುಮಾರ್ ಹಾಗೂ ಬಿಜೆಪಿ ಕಾರ್ಯಕರ್ತರು ಇದ್ದರು.