ಜಿಲ್ಲೆ

ಬಿಜೆಪಿ ಕೋಟೆ ಕೈವಶ ಮಾಡಿಕೊಂಡ ಕಾಂಗ್ರೆಸ್

ಮಡಿಕೇರಿ:

ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಕೊಡಗು ಜಿಲ್ಲೆಯ ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ ಡಾ.ಮಂಥರ್ ಗೌಡ ಅವರು ಜಯ ಸಾಧಿಸಿದ್ದಾರೆ. ವಿರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಎ.ಎಸ್. ಪೊನ್ನಣ್ಣ ಜಯಗಳಿಸಿದ್ದಾರೆ. ಗೆಲುವು ಸಾಧಿಸಿದ ಡಾ.ಮಂಥರ್ ಗೌಡ ಅವರಿಗೆ ಮಡಿಕೇರಿ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಡಾ.ಯತೀಶ್ ಉಲ್ಲಾಳ್ ಚುನಾವಣಾ ಪ್ರಮಾಣ ಪತ್ರ ನೀಡಿದರು. ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಶಬನಾ ಎಂ.ಶೇಕ್ ಎ.ಎಸ್.ಪೊನ್ನಣ್ಣ ಅವರಿಗೆ ಚುನಾವಣಾ ಪ್ರಮಾಣ ಪತ್ರ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ, ತಹಶೀಲ್ದಾರರು ಮತ್ತು ಸಹಾಯಕ ಚುನಾವಣಾಧಿಕಾರಿಗಳಾದ ಎಸ್.ಎನ್.ನರಗುಂದ, ಕಿರಣ್ ಗೌರಯ್ಯ, ಪ್ರಮೋದ್, ರಾಮಚಂದ್ರ, ಚುನಾವಣಾ ತಹಶೀಲ್ದಾರ್ ರವಿಶಂಕರ್ ಇತರರು ಇದ್ದರು.
ಇದೇ ವೇಳೆ ಜಿಲ್ಲಾಧಿಕಾರಿ ಡಾ.ಬಿ.ಸಿ ಸತೀಶ್, ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ನಂಜುಂಡೇಗೌಡ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್.ಸುಂದರರಾಜ್ ಅವರು ಮಾಧ್ಯಮ ಕೇಂದ್ರಕ್ಕೆ ಭೇಟಿ ನೀಡಿ ವಿಕ್ಷೀಸಿದರು.