ಜಿಲ್ಲೆ

ಬಿಜೆಪಿ ದುರಾಡಳಿತಕ್ಕೆ ಬೇಸತ್ತ ಜನ - ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್

ಬೆಳಗಾವಿ: ಬಿಜೆಪಿ ಸರ್ಕಾರಗಳ ದುರಾಡಳಿತದಿಂದಾಗಿ ದೇಶದ ಜನ ಇಂದು ಬೆಲೆ ಏರಿಕೆ ಬಿಸಿ ತಾಳಲಾರದೆ ಬೀದಿಗೆ ಬರುವಂತಾಗಿದೆ ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
ತೈಲ, ಗ್ಯಾಸ್ ಹಾಗೂ ದಿನಬಳಕೆ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಶನಿವಾರ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಮೊದಗಾ, ಬಡಸ ಕೆ.ಎಚ್. ಗ್ರಾಮಗಳಲ್ಲಿ ಪಕ್ಷದ ಕಾರ್ಯಕರ್ತರ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಅತಿವೃಷ್ಟಿ, ಕೋವಿಡ್, ಲಾಕ್‌ಡೌನ್‌ನಿಂದಾಗಿ ನಗರ ಮತ್ತು ಗ್ರಾಮೀಣ ಭಾಗದಲ್ಲಿನ ಜನ ಉದ್ಯೋಗ ಕಳೆದುಕೊಂಡು ಕಂಗಾಲಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಸರ್ಕಾರ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುವ ಮೂಲಕ ಗಾಯದ ಮೇಲೆ ಬರೆಎಳೆಯುತ್ತಿದೆ. ಬಿಜೆಪಿ ಸರ್ಕಾರ ಶ್ರೀಮಂತರು, ಉದ್ಯಮಿಗಳ ಪರವಾಗಿ ಕೆಲಸ ಮಾಡುವ ಮೂಲಕ ಬಡವರನ್ನು ದೂರ ತಳ್ಳುತ್ತಿದೆ ಎಂದು ಆರೋಪಿಸಿದರು.

ತಾಪಂ ಅಧ್ಯಕ್ಷ ಶಂಕರಗೌಡ ಪಾಟೀಲ, ಮುಖಂಡ ಚನ್ನರಾಜ ಹಟ್ಟಿಹೊಳಿ, ಗ್ರಾಪಂ ಸದಸ್ಯರು, ಕಾಂಗ್ರೆಸ್ ಕಾರ್ಯಕರ್ತರು ಇದ್ದರು.