ಜಿಲ್ಲೆ

ಬಿಜೆಪಿ ಮಾಜಿ ಸಿಎಂ ಅಶ್ಲೀಲ ಸಿಡಿ

ಬಾಗಲಕೋಟೆ: ಅತಿ ಶೀಘ್ರದಲ್ಲಿ ಬಿಜೆಪಿಯ ಮಾಜಿ ಮುಖ್ಯಮಂತ್ರಿ ಒಬ್ಬರ ಅಶ್ಲೀಲ ಸಿಡಿ ಬಿಡುಗಡೆ ಆಗೋದಿದೆ ಎನ್ನುವ ಸುದ್ದಿ ಬಂದಿದೆ ಎಂದು ಜಮಖಂಡಿ ಮಾಜಿ ಶಾಸಕ ಆನಂದ ನ್ಯಾಮಗೌಡ ಹೇಳಿದ್ದಾರೆ.

ಸಿಎಂ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ನೀಡಿರುವುದನ್ನು ವಿರೋಧಿಸಿ ಜಮಖಂಡಿ ನಗರದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಶನಿವಾರ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ತಮ್ಮ ಭಾಷಣದಲ್ಲಿ ಈ ವಿಷಯ ತಿಳಿಸಿದರು.

ಬಿಜೆಪಿಯಿಂದ ರಾಜ್ಯದ ಮುಖ್ಯಮಂತ್ರಿ ಆಗಿದ್ದವರು ಒಬ್ಬರ ಸಿಡಿ ಬರುವ ಸುದ್ದಿ ಬಂದಿದೆ. ಅದನ್ನು ನೀವು ನೋಡಿದ್ದೀರೋ ಇಲ್ಲವೋ ಗೊತ್ತಿಲ್ಲ. ನಾನು ಇವತ್ತು ಆ ಸುದ್ದಿ ಕೇಳಿದ್ದೇನೆ. ಅತಿ ಶೀಘ್ರದಲ್ಲಿ ಆ ಅಶ್ಲೀಲ ಸಿಡಿ ಹೊರಬರಲಿದೆಯಂತೆ ಎಂದು ಕೈ ಕಾರ್ಯಕರ್ತರ ಎದುರು ಹೇಳಿದರು.