ಜಿಲ್ಲೆ

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬಂಧನಕ್ಕೆ ಜಿಲ್ಲಾ ಬಿಜೆಪಿ ಆಕ್ರೋಶ

ಹಾಸನ: ಮುಡಾದಲ್ಲಿ ನಡೆದ ಸಾವಿರಾರು ಕೋಟಿ ರೂ. ಹಗರಣ ಖಂಡಿಸಿ ಪ್ರತಿಭಟನೆಗೆ ತೆರಳುತ್ತಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ರಾಜ್ಯ ಸರ್ಕಾರ ಬಂಧಿಸಿರುವ ಕ್ರಮವನ್ನು ಖಂಡಿಸಿ ಜು. 14 ರಂದು ವಿಧಾನಸೌಧ ಚಲೋ ಹಮಿಕೊಳ್ಳಲಾಗಿದೆ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಮಿತ್ ಶೆಟ್ಟಿ ತಿಳಿಸದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ವಾಲ್ಮೀಕಿ ನಿಗಮದಲ್ಲಿ ನಡೆದ ಬಹುಕೋಟಿ ಹಗರಣದ ಬಳಿಕ ಮುಡಾದಲ್ಲಿ ನಡೆದ ಸಾವಿರಾರು ಕೋಟಿ ರೂ. ಅವ್ಯವಹಾರ ಬಯಲಿಗೆ ಬಂದಿದೆ. ರಾಜ್ಯ ಕಾಂಗ್ರೆಸ್? ಅಧಿಕಾರಕ್ಕೆ ಬಂದ ಒಂದು ವರ್ಷದಿಂದ ಭ್ರಷ್ಟಾಚಾರದಲ್ಲೆ ಮುಳುಗಿದೆ.ಇದರ ವಿರುಧ್ಧ ಪ್ರತಿಭಟನೆ ಮಾಡುವ ವಿರೋಧ ಪಕ್ಷದವರನ್ನ ಬಂಧಿಸುವ ಮೂಲಕ ಪ್ರಜಾಪ್ರಭುತ್ವಕ್ಕೆ ಮಸಿ ಬಳಿದಿದೆ ಆಕ್ರೋಶ ವ್ಯಕ್ತಪಡಿಸಿದರು.
ಅವ್ಯವಹಾರದ ಸಮಗ್ರ ತನಿಖೆಗೆ ಆಗ್ರಹಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದಾಗ ಮಾರ್ಗ ಮಧ್ಯೆ ಬಂಧಿಸಿರುವುದು ಪ್ರಜಾಪ್ರಭುತ್ವ ವಿರೋಧಿ ನಡೆಯಾಗಿದೆ. ಆ ಮೂಲಕ ವಿರೋಧ ಪಕ್ಷಗಳ ಶಕ್ತಿ ಕುಗ್ಗಿಸಲಾಗುತ್ತಿದೆ ಎಂದರು.
ಕಾಂಗ್ರೆಸ್?ನ ಈ ಜನ ವಿರೋಧಿ ನೀತಿ ಖಂಡಿಸಿ ಜು. 14 ರಂದು ವಿಧಾನಸೌಧ ಚಲೋ ಹಮಿಕೊಳ್ಳಲಾಗಿದೆ. ರಾಜ್ಯಾದ್ಯಂತ ಪ್ರತಿಭಟನೆ ನಡೆಸುವ ಮೂಲಕ ಭ್ರಷ್ಟಾಚಾರವನ್ನು ಖಂಡಿಸಲಾಗುವುದು ಎಂದರು.
ಮುಖಂಡ ಜಿ.ದೇವರಾಜೇಗೌಡ ಅವರು ಮಾತನನಾಡಿ, ಸರ್ಕಾರಿ ನಿವೇಶನವನ್ನು ತನ್ನ ಪತ್ನಿ ಹೆಸರಿಗೆ ಬೇನಾಮಿಯಾಗಿ ಖಾತೆ ಮಾಡಿಸಿಕೊಂಡ ದೇಶದ ಮೊದಲ ಮುಖ್ಯಮಂತ್ರಿ ಸಿದ್ದರಾಮಯ್ಯ. ಈ ಪ್ರಕರಣದಿಂದ ರಾಷ್ಟ್ರ ಮಟ್ಟದಲ್ಲಿ ಕರ್ನಾಟಕದ ಹೆಸರು ಹಾಳಾಗಿದೆ. ತಕ್ಷಣವೇ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಪ್ರೀತಿವರ್ಧನ್, ಹರ್ಷಿತ್, ಶಕುನಿಗೌಡ, ಆನಂದ್, ಮಹೇಶ್, ನಟರಾಜು, ರಘು ಇತರರಿದ್ದರು.