ಚಾಮರಾಜನಗರ: ಕಾಂಗ್ರೆಸ್ ಬಿಜೆಪಿ ರಾಜ್ಯದಲ್ಲಿ ಸಮಾಜಗಳನ್ನು ಹತ್ತಿಕುವ ಕೆಲಸ ಮಾಡುತ್ತಿದ್ದು ಅದರಲ್ಲಿ ನಾಯಕ ಸಮಾಜವನ್ನು ರಾಜಕೀಯವಾಗಿ ಮುಗಿಸುವ ಸರ್ಜರಿ ಮಾಡುತ್ತಿದೆ. ಮುಂದಿನ ಚುನಾವಣೆಯಲ್ಲಿ ಸಮಾಜದ ಶೀಗಳ ನೇತೃತ್ವದಲ್ಲಿ ರಾಜ್ಯಾದ್ಯಂತ ಸಂಘಟನೆಯಾಗಿ ತಕ್ಕಪಾಠ ಕಲಿಸಬೇಕಾಗುತ್ತದೆ ಎಂದು ವಾಲ್ಮೀಕಿ ಸಮಾಜ ಸೇವಾ ಸಮಿತಿ ಅಧ್ಯಕ್ಷ ಕೆಲಂಬಳ್ಳಿ ಸೋಮನಾಯಕ ಎಚ್ಚರಿಸಿದರು.
ನಗರದ ಜಿಲ್ಲಾ ಕಾರ್ಯನಿತ ಪತ್ರಕರ್ತರ ಭವನದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಆಗಲು ಶ್ರೀರಾಮುಲು ನಾಯಕತ್ವ ಕಾರಣವಾಗಿದೆ. ಇದನ್ನು ವಿಜಯೇಂದ್ರ ಅರಿಯಬೇಕು. ನಮ್ಮ ಸಮಾಜದ ರಾಜ್ಯ ನಾಯಕರು ಶ್ರೀರಾಮಲು. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬಂದಾಗ ರಮೇಶ್ ಜಾರಕಿಹೊಳಿ, ಶ್ರೀರಾಮುಲು ಇಲ್ಲದಿದ್ದರೆ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಆಗುತ್ತಿರಲಿಲ್ಲ. ಬಿಜೆಪಿ ಸರ್ಕಾರವೂ ಬರುತ್ತಿರಲಿಲ್ಲ. ಯಡಿಯೂರಪ್ಪ ಅವರಿಗೆ ಮುಖ್ಯಮಂತ್ರಿ ಆಗುವ ಎಲ್ಲ ಅರ್ಹತೆವಿದ್ದು, ಎಲ್ಲ ಸಮುದಾಯಗಳ ವಿಶ್ವಾಸ ಹೊಂದಿದ್ದರು. ಆದರೆ ಅವರ ಪುತ್ರ ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದು, ರಾಜ್ಯದಲ್ಲಿ ಬಿಜೆಪಿ ಸರ್ಕಾರ ತಂದು ಕೊಟ್ಟ ರಮೇಶ್ ಜಾರಕಿಹೊಳಿ ಅವರನ್ನು ರಾಜ್ಯದಲ್ಲಿ ತಿರುಗಾಡಲು ಆಗುವುದಿಲ್ಲ ಎಂದಿರುವುದು ಖಂಡನೀಯ, ಇಡೀ ನಾಯಕ ಸಮಾಜವನ್ನು ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು.
ರಾಜ್ಯದಲ್ಲಿ ಬಿಜೆಪಿ ಸರ್ಕಾರವನ್ನು ತಂದುಕೊಟ್ಟ ರಮೇಶ್ ಜಾರಕಿಹೊಳಿ ಅವರನ್ನು ರಾಜ್ಯದಲ್ಲಿ ತಿರುಗಾಡಬಾರದು ಅನ್ನುವ ಬಿಜೆಪಿ ರಾಜ್ಯಾಧ್ಯಕ್ಷರನ್ನು ಉಳಿಸಿಕೊಂಡರೆ ಬಿಜೆಪಿ ಗ್ರಾ.ಪಂ.ಚುನಾವಣೆಯನ್ನು ಗೆಲ್ಲುವುದಿಲ್ಲ. ಇಡೀ ರಾಜ್ಯದಲ್ಲಿ ನಾಯಕ ಸಮಾಜ ಬಿಜೆಪಿ ಒಂದು ಕೊಡುಗೆಯಾಗಿದೆ. ಅಂತರದಲ್ಲೂ ಸಮುದಾಯದ ರಾಜ್ಯ ನಾಯಕರಾದ ಶ್ರೀ ಅವರನ್ನು ಜನಾರ್ದನ್ ರೆಡ್ಡಿ ತೆಜೋವಧೆ ಮಾಡುವುದು ಸರಿಯಲ್ಲ ಎಂದರು.
ಕಾಂಗ್ರೆನಲ್ಲೂ ಕೂಡ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ರಾಜಕೀಯವಾಗಿ ಮುಗಿಸುವ ಹುನ್ನಾರ ನಡೆಯುತಿದ್ದೆ. ಸಮಾಜವನ್ನು ಕಡೆಗಣಿಸುತ್ತಿರುವ ಬಿಜೆಪಿ, ಕಾಂಗ್ರೆಸ್ ಗೆ ಮುಂದಿನ ದಿನಗಳಲ್ಲಿ ಸಮುದಾಯದ ಶ್ರೀಗಳ ನೇತೃತ್ವದಲ್ಲಿ ಸಂಘಟನೆಯಾಗಿ ಹರಿಯಾದ ಪಾಠ ಕಲಿಸುತ್ತದೆ ಎಂದು ಎಚ್ಚರಿಸಿದರು.
ರಾಜ್ಯ ಪ್ರಧಾನ ಕಾರ್ಯದರ್ಶಿ ರಂಗಸ್ವಾಮಿ ಮಾತನಾಡಿ, ಬಿಜೆಪಿ ಪಕ್ಷಕ್ಕೆ ಅಪಾರ ಕೊಡುಗೆ ಕೊಟ್ಟಿರುವ ಮಾಜಿ ಸಚಿವ, ನಾಯಕ ಸಮುದಾಯದ ರಾಜ್ಯ ನಾಯಕರಾದ ಶ್ರೀರಾಮುಲು ಅವರನ್ನು ಹಗುರುವಾಗಿ ಮಾತನಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹಾಗೂ ಬಿಜೆಪಿ, ಕಾಂಗ್ರೆಸ್ ನಾಯಕ ಸಮಾಜವನ್ನು ಕಡೆಗಣಿಸುತ್ತಿದ್ದು, ಮಲತಾಯಿಧೋರಣೆ ಅನುಸರಿಸುತ್ತಿದ್ದು ಇದರ ವಿರುದ್ಧ ವಾಲ್ಮೀಕಿ ಸಮಾಜ ಸೇವಾ ಸಮಿತಿ ರಾಜ್ಯಾಧ್ಯಕ್ಷರಾದ ಕೆಲ್ಲಂಬಳ್ಳಿ ಸೋಮನಾಯಕ ಅವರ ನೇತೃತ್ವದಲ್ಲಿ ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳಲಾಗುತ್ತದೆ ಜಿಲ್ಲೆಯಿಂದಲ್ಲೇ ಹೋರಾಟ ಆರಂಭಿಸಲಾಗುವುದು ಎಂದರು. ಯಜಮಾನ ರಾಜುನಾಯಕ ಹಾಜರಿದ್ದರು.