ಜಿಲ್ಲೆ

ಬಿಜೆಪಿ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ

ಚಿತ್ರದುರ್ಗ: ಕಾಂಗ್ರೆಸ್ ನಾಯಕ ರಾಹುಲ್‌ಗಾಂಧಿ ಅವರನ್ನು ಸಾಮಾಜಿಕ ಜಾಲತಾಣದಲ್ಲಿ ರಾವಣನಿಗೆ ಹೋಲಿಸಿರುವ ಬಿಜೆಪಿ ವಿರುದ್ಧ ಕಾಂಗ್ರೆಸ್ ಜಿಲ್ಲಾ ಘಟಕದ ಕಾರ್ಯಕರ್ತರು ಶನಿವಾರ ಪ್ರತಿಭಟನೆ ನಡೆಸಿದರು.

ಪಕ್ಷದ ಜಿಲ್ಲಾಧ್ಯಕ್ಷ ಎಂ.ಕೆ.ತಾಜ್‌ಪೀರ್ ಮಾತನಾಡಿ, ರಾಹುಲ್‌ಗಾಂಧಿ ಅವರ ಭಾರತ್ ಜೋಡೋ ಯಾತ್ರೆ ಯಶಸ್ಸನ್ನು ಸಹಿಸದ ಕೋಮುವಾದಿ ಬಿಜೆಪಿಯವರು ಈ ರೀತಿ ಅವಮಾನಿಸಲು ಮುಂದಾಗಿರುವುದನ್ನು ಸಹಿಸುವುದಿಲ್ಲ ಎಂದರು.

ರಾಹುಲ್ ಅವರು ರೈತರು, ಕಾರ್ಮಿಕರು, ಮಹಿಳೆಯರು, ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಿ ಸಮಸ್ಯೆ ಆಲಿಸಿದ್ದು, ರಾಜ್ಯದಲ್ಲಿ ಬಿಜೆಪಿ ಹೀನಾಯ ಸೋಲು ಕಂಡಿತು. ಮುಂಬರುವ ಚುನಾವಣೆಗಳಲ್ಲೂ ಸೋಲುವ ಭೀತಿಯಿಂದಾಗಿ ಇಲ್ಲಸಲ್ಲದ ಅಪಪ್ರಚಾರದಲ್ಲಿ ತೊಡಗಿದ್ದಾರೆ. ಇದು ಯಾರಿಗೂ ಶೋಭೆ ತರುವಂತದ್ದಲ್ಲ ಎಂದು ವಾಗ್ದಾಳಿ ನಡೆಸಿದರು.

ಮಹಿಳಾ ಜಿಲ್ಲಾಧ್ಯಕ್ಷೆ ಗೀತಾ ನಂದಿನಿಗೌಡ, ಮುಖಂಡರಾದ ಕೆ.ಪಿ.ಸಂಪತ್‌ಕುಮಾರ್, ಡಿ.ಎನ್.ಮೈಲಾರಪ್ಪ, ರೇಣುಕಾ ಶಿವು, ಎನ್.ಬಿ.ಟಿ.ಜಮೀರ್, ಎಸ್.ಎನ್.ರವಿಕುಮಾರ್, ಭಾಗ್ಯಮ್ಮ, ಅಶೋಕ್‌ನಾಯ್ಡು, ಮುನಿರಾ ಎ.ಮಕಾಂದಾರ್, ಮೆಹಬೂಬ್ ಖಾತೂನ್, ಪಿ.ಕೆ.ಮೀನಾಕ್ಷಿ, ಎನ್.ಡಿ.ಕುಮಾರ್, ಆರ್.ಪ್ರಕಾಶ್, ಸೈಯದ್ ಖುದ್ದೂಸ್, ಡಿ.ಕುಮಾರ್, ಮುದಸಿರ್ ನವಾಜ್, ಮೊಹಿದ್ದೀನ್ ಚೋಟು ಇತರರಿದ್ದರು.