ಜಿಲ್ಲೆ

ಬಿಜೆಪಿಯಿಂದ ರೈತ ಜಾಗೃತಿ ಅಭಿಯಾನಕ್ಕೆ ಚಾಲನೆ

ವಿಜಯಪುರ: ನಗರದ ಮಹೇಶ್ವರಿ ಮಂಗಲ ಕಾರ್ಯಾಲಯದಲ್ಲಿ ಬಿಜೆಪಿ ರೈತ ಮೋರ್ಚಾ ವತಿಯಿಂದ ರೈತ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಲಾಯಿತು.

ಜಿಲ್ಲಾಧ್ಯಕ್ಷ ಕಾಸುಗೌಡ ಬಿರಾದಾರ ಮಾತನಾಡಿ, ಹಲವು ಸಂಕಷ್ಟಗಳ ಮಧ್ಯೆ ಸರ್ಕಾರ ಅಗಾಧ ಸಾಧನೆ ಮಾಡಿದೆ. ಸಂಕಷ್ಟಗಳ ನಡುವೆಯೂ ಜನಪರ ಯೋಜನೆಗಳನ್ನು ಜಾರಿಗೊಳಿಸಿದೆ. ರೈತರ ಹಿತಕ್ಕಾಗಿ ಜಾರಿಗೆ ತಂದ ಕೃಷಿ ಮಸೂದೆ ರೈತ ಪರವಾಗಿದ್ದು ಸ್ವಾವಲಂಬಿ ಬದುಕಿಗೆ ಸಹಕಾರಿಯಾಗಿದೆ ಎಂದರು.

ರಾಜ್ಯಾಧ್ಯಕ್ಷ ಈರಣ್ಣ ಕಡಾಡಿ ಮಾತನಾಡಿ, ಕೃಷಿ ಕ್ಷೇತ್ರದ ಸುಧಾರಣೆಯ ದಿಸೆಯಲ್ಲಿ ಕೇಂದ್ರ ಸರ್ಕಾರ ಅಂಗೀಕಾರ ಪಡೆದ ಮೂರು ಮಸೂದೆಗಳಿಂದ ರೈತರಿಗೆ ಸಿಗುವ ಕನಿಷ್ಠ ಬೆಂಬಲ ಬೆಲೆ (ಎಂ.ಎಸ್.ಪಿ) ನೀಡುವುದನ್ನು ಸ್ಥಗಿತಗೊಳಿಸುವುದಿಲ್ಲ. ಈ ಮಸೂದೆಯು ರೈತರ ಪರವಾಗಿದೆ. ವಿರೋಧ ಪಕ್ಷ ರೈತರ ದಿಕ್ಕು ತಪ್ಪಿಸುವ ಕೆಲಸದಲ್ಲಿ ನಿರತವಾಗಿದೆ ಎಂದರು.

ಮುಖಂಡ ಶಿವಪ್ರಸಾದ, ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ ಮಾತನಾಡಿದರು. ಜಿಲ್ಲಾಧ್ಯಕ್ಷ ಆರ್.ಎಸ್. ಪಾಟೀಲ ಕೂಚಬಾಳ, ವಿಪ ಸದಸ್ಯ ಅರುಣ ಶಹಾಪುರ,ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ, ಚಂದ್ರಶೇಖರ ಕವಟಗಿ, ವಿಜುಗೌಡ ಪಾಟೀಲ, ಶಿವರುದ್ರ ಬಾಗಲಕೋಟ, ಬಸವರಾಜ ಬಿರಾದಾರ, ಮಲ್ಲಿಕಾರ್ಜುನ ಜೋಗೂರ, ಪ್ರಭುಗೌಡ ದೇಸಾಯಿ, ಲೋಕೇಶಗೌಡ, ಸಿದ್ದು ಬುಳ್ಳಾ, ರಮೇಶ ಶಾಪೇಟಿ, ಸಿದ್ದು ಪಾಟೀಲ, ಗಿರೀಶ ಪಾಟೀಲ, ಸುರೇಶ ಕುಲಕರ್ಣಿ ಉಪಸ್ಥಿತರಿದ್ದರು.