ಜಿಲ್ಲೆ

ಸಮಾಜಸೇವೆಯಿಂದ ನಿವೃತ್ತಿ ಬಳಿಕ ಸಕ್ರಿಯ

ಬಂಟ್ವಾಳ: ತಾಲೂಕು ಪಿಂಚಣಿದಾರರ ಸಂಘದ ಮಹಾಸಭೆ ಲಯನ್ಸ್ ಸೇವಾ ಮಂದಿರದಲ್ಲಿ ನಡೆಯಿತು.

ಫರಂಗಿಪೇಟೆ ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೆ.ಕೃಷ್ಣಕುಮಾರ ಪೂಂಜ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ನಾವು ನಿವೃತ್ತರಾದರೂ ಸಮಾಜ ಸೇವೆ ಮಾಡುವುದರ ಮೂಲಕ ಪ್ರವೃತ್ತರಾಗಬೇಕು ಎಂದರು.

ನಿವೃತ್ತ ಪ್ರಾಧ್ಯಾಪಕ ಡಾ.ಟಿ.ಕೆ.ರವೀಂದ್ರನ್ ಅತಿಥಿಯಾಗಿ ಭಾಗವಹಿಸಿದ್ದರು. ಸಂಘದ ಅಧ್ಯಕ್ಷ ಪಿ.ಲೋಕನಾಥ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.

75 ವರ್ಷ ತುಂಬಿದ ಸದಸ್ಯರಾದ ಗೋಪಾಲ ರಾವ್ ಸಂಚಯಗಿರಿ, ಕೆ.ಎಚ್.ವಸಂತ ಕುಮಾರ್, ಅಪ್ಪಯ್ಯ ಶೆಟ್ಟಿ, ನರಸಿಂಹ ಭಟ್, ವೆಂಕಟ್ರಮಣ ಭಟ್, ಆನಂದಿ, ಟಿ.ಕೆ.ದಯಾನಂದ, ದಾಮೋದರ ಶೆಟ್ಟಿಗಾರ್, ಲಕ್ಷ್ಮೀ ನೇರಳಕಟ್ಟೆ, ಪದ್ಮನಾಭ ರಾವ್ ಕೈಕುಂಜೆ, ಮಾಧವ ಮಾರ್ಲ ಮೊಡಂಕಾಪು, ಜಿ.ಎ.ಭಾವ ಅಮ್ಮುಂಜೆ, ವನಿಲಾ ಅಲೆತ್ತೂರು, ಗೋಪಾಲಕೃಷ್ಣ ರೈ ಬರಿಮಾರ್, ಗೋವರ್ಧನ್ ಶೆಣೈ, ಲಕ್ಷ್ಮೀಯಮ್ಮ ಬೊಕ್ಕಸ ಅವರನ್ನು ಸನ್ಮಾನಿಸಲಾಯಿತು.

ಉಪಾಧ್ಯಕ್ಷ ಸಂಕಪ್ಪ ಶೆಟ್ಟಿ ಸ್ವಾಗತಿಸಿದರು. ಕಾರ್ಯದರ್ಶಿ ನಿಲೋಜಿ ರಾವ್ ವರದಿ ಮಂಡಿಸಿದರು. ಕೋಶಾಧಿಕಾರಿ ಜಲಜಾಕ್ಷಿ ಕುಲಾಲ್ ಲೆಕ್ಕಪತ್ರ ಮಂಡಿಸಿದರು. ಸಂಘದ ಜತೆಕಾರ್ಯದರ್ಶಿ ಜಯರಾಮ ಪೂಜಾರಿ ವಂದಿಸಿದರು. ಸಂಘದ ಉಪಾಧ್ಯಕ್ಷ ಮಧುಕರ ಮಲ್ಯ, ಸಂಘಟನಾ ಕಾರ್ಯದಶಿ ಚಂದ್ರಶೇಖರ ಗಟ್ಟಿ ಸಹಕರಿಸಿದರು. ಶೇಷಪ್ಪ ಮಾಸ್ಟರ್ ಕಾರ್ಯಕ್ರಮ ನಿರ್ವಹಿಸಿದರು.