ಚಾಮರಾಜನಗರ: ತಾಲೂಕಿನ ಬಸವಾಪುರ ಗ್ರಾಮದ ಬಿಪಿನ್.ನಾಗರಾಜ್ ಅವರಿಗೆ ಮೈಸೂರು ವಿಶ್ವವಿದ್ಯಾನಿಲಯವು ರಾಜ್ಯಶಾಸ್ತ್ರ ವಿಷಯದಲ್ಲಿ ಪಿ.ಹೆಚ್ ಡಿ (Ph.d)ಪದವಿ ನೀಡಿದೆ.
ಮೈಸೂರು ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಪ್ರೊ.ಎಂ.ಜಿ.ಹನುಮಂತರಾಜು ಅವರ ಮಾರ್ಗದರ್ಶನದಲ್ಲಿ "ಕರ್ನಾಟಕದಲ್ಲಿ ದಲಿತ ಚಳುವಳಿಯ ರಾಜಕಾರಣ ವಿಶೇಷವಾಗಿ ಮೈಸೂರು ಮತ್ತು ಚಾಮಾರಾಜನಗರ ಜಿಲ್ಲೆಗಳನ್ನು ಅನುಲಕ್ಷಿಸಿ ಒಂದು ತೌಲನಿಕ ವಿಶ್ಲೇಷಣೆ" ಎಂಬ ಮಹಾ ಪ್ರಬಂಧಕ್ಕೆ ಪಿ.ಎಚ್ ಡಿ(Ph.d) ಪದವಿ ನೀಡಲಾಗಿದೆ.
ಪ್ರಸ್ತುತ ಬಿಪಿನ್. ನಾಗರಾಜ್ ಅವರು ಮೈಸೂರು ವಿಶ್ವವಿದ್ಯಾಲಯದ ಮಹಾರಾಜ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಗ್ರಾಮಕ್ಕೆ ಮೊದಲ ಪಿ.ಎಚ್ ಡಿ ಪದವಿ ಪಡೆದವರು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಅಲ್ಲದೆ ಕಳೆದ 22 ವರ್ಷಗಳಿಂದ ಬಹುಜನ ಚಳುವಳಿಯಲ್ಲಿ ಸಕ್ರಿಯರಾಗಿರುವ ಬಿಪಿನ್.ನಾಗರಾಜ್ ಅವರು ರಾಜ್ಯ ಸಂಪನ್ಮೂಲ ವ್ಯಕ್ತಿಯಾಗಿ ಗುರುತಿಸಿಕೊಂಡಿದ್ದಾರೆ. ಅವರಿಗೆ ಪರಿವರ್ತನಾ ಅಧ್ಯಯನ ಕೇಂದ್ರ ಪದಾಧಿಕಾರಿಗಳು ಅಭಿನಂದನೆ ಸಲ್ಲಿಸಿದ್ದಾರೆ.