ಚಿಕ್ಕಮಗಳೂರು: ಅತಿ ಶೀಘ್ರದಲ್ಲಿ ಬೀದಿ ನಾಯಿಗಳಿಗೆ ಸಂತಾನ ಹರಣ ಶಸ್ತç ಚಿಕಿತ್ಸೆ ಮಾಡುವ ಮೂಲಕ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಅಧಿಕಾರಿಗಳ ಸಭೆ ನಡೆಸಿದ ಅವರು, ಚಿಕ್ಕಮಗಳೂರು ನಗರ ಸೇರಿಂದತೆ ತಾಲೂಕಿನ ಗ್ರಾಪಂಗಳ ವ್ಯಾಪ್ತಿಗಳಲ್ಲಿ ಬೀದಿನಾಯಿಗಳ ಉಪಟಳ, ಬೀಡಾಡಿ ದನಗಳಿಂದ ತೊಂದರೆಯಾಗುತ್ತಿರುವ ಬಗ್ಗೆ ಸಾರ್ವಜನಿಕರಿಂದ ನಗರಸಭೆ ಹಾಗೂ ತಾಲೂಕು ಪಂಚಾಯತಿಗೆ ದೂರುಗಳು ಬರುತ್ತಿವೆ. ಈ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದರು.
ಕಸಬಾ ಹೋಬಳಿ ಇಂದಾವರ ಗ್ರಾಮದ ಸರ್ವೆ ನಂ.೩೬ ರಲ್ಲಿ ೧೫ ಎಕರೆ ಜಾಗವನ್ನು ಪಶುಸಂಗೋಪನೆ ಇಲಾಖೆಗೆ ಮೀಸಲಿಟ್ಟಿದ್ದು, ಅದರಲ್ಲಿ ಎರಡು ಎಕರೆ ಜಾಗದಲ್ಲಿ ಬೀದಿನಾಯಿಗಳನ್ನು ಪಳಗಿಸಿ ಚಿಕಿತ್ಸೆ ನೀಡಲು ಸಂಬAಧಿಸಿದ ಪಶುಸಂಗೋಪನೆ ಇಲಾಖೆ ಉಪನಿರ್ದೇಶಕರಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ಈ ಸಂಬAಧ ಇನ್ನೊಂದು ತಿಂಗಳಲ್ಲಿ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ ಬೀದಿನಾಯಿಗಳನ್ನು ಹಿಡಿದು ಸಂತಾನ ಹರಣ ಶಸ್ತç ಚಿಕಿತ್ಸೆ ಮಾಡಿ ಪುನಃ ಸ್ವಸ್ಥಾನಕ್ಕೆ ಬೀದಿನಾಯಿಗಳನ್ನು ತಂದು ಬಿಡಲಾಗುವುದು ಎಂದರು.
ವರ್ಷದಲ್ಲಿ ಎರಡು ಬಾರಿ ಸಂತಾನ ಹರಣ ಶಸ್ತç ಚಿಕಿತ್ಸೆ ನೀಡಿದರೆ ಬೀದಿನಾಯಿಗಳ ಸಂತತಿ ಕಡಿಮೆಯಾಗುತ್ತದೆ ಎಂದು ಪಶುಸಂಗೋಪನೆ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ ಎಂದು ವಿವರಿಸಿದರು.
ಬಿಡಾಡಿ ದನಗಳನ್ನು ಸಾಕಿರುವವರಿಗೆ ನಗರಸಭೆಯಿಂದ ರಸ್ತೆಗೆ ಬಿಡದಂತೆ ಸೂಚನೆ ಪತ್ರ ನೀಡಿದ್ದು, ನಿರ್ಲಕ್ಷö್ಯ ವಹಿಸಿ ದನಗಳನ್ನು ಬೀದಿಗೆ ಬಿಟ್ಟರೆ ಬೇರೆಡೆಗೆ ಸಾಗಿಸಲು ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ನಗರದ ಕಲ್ಯಾಣ ಮಂಟಪಗಳ ಮುಂಭಾಗದಲ್ಲಿ ವಾಹನಗಳನ್ನು ನಿಲುಗಡೆ ಮಾಡುತ್ತಿರುವುದರಿಂದ ಸಂಚಾರಕ್ಕೆ ತೊಂದರೆಯಾಗುತ್ತಿದ್ದು, ಈ ಬಗ್ಗೆ ಸಾರ್ವಜನಿಕರ ದೂರನ್ನು ಗಂಭೀರವಾಗಿ ಪರಿಗಣಿಸಿ ಕಲ್ಯಾಣ ಮಂಟಪದ ಮಾಲಿಕರು ಸೆಕ್ಯುರಿಟಿ ಗಾರ್ಡ್ ಒಬ್ಬರನ್ನು ನೇಮಕ ಮಾಡಿಕೊಂಡು ದೂರದಲ್ಲಿ ವಾಹನ ನಿಲುಗಡೆ ಮಾಡಲು ಕ್ರಮಕೈಗೊಳ್ಳಬೇಕು ಎಂದು ಮನವಿ ಮಾಡಿದರು.
ನಗರಸಭಾಧ್ಯಕ್ಷೆ ಶೀಲಾ ದಿನೇಶ್ ಮಾತನಾಡಿ, ಬೀದಿನಾಯಿಗಳ ಉಪಟಳದಿಂದ ನಾಗರಿಕರಿಗೆ ತೊಂದರೆಯಾಗುತ್ತಿರುವುದನ್ನು ಮನಗಂಡು ಅವುಗಳ ನಿಯಂತ್ರಣಕ್ಕೆ ನಗರಸಭೆಯಿಂದ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ನಗರಸಭೆ ಆಯುಕ್ತ ಬಿ.ಸಿ ಬಸವರಾಜ್ ಮಾತನಾಡಿ, ಕಳೆದೆರಡು ವರ್ಷಗಳಿಂದ ೩,೫೦೦ ಬೀದಿನಾಯಿಗಳಿಗೆ ಸಂತಾನ ಹರಣ ಶಸ್ತçಚಿಕಿತ್ಸೆ ಮಾಡಲಾಗಿದೆ. ಪ್ರಸಕ್ತ ವರ್ಷ ೨೦೦೦ ಬೀದಿನಾಯಿಗಳಿಗೆ ಶಸ್ತçಚಿಕಿತ್ಸೆ ಮಾಡುವ ಗುರಿಹೊಂದಲಾಗಿದ್ದು, ಶೀಘ್ರವೇ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ ಕನಿಷ್ಟ ೬ ತಿಂಗಳಿಗೊಮ್ಮೆ ಶಸ್ತçಚಿಕಿತ್ಸೆ ಮಾಡಲಾಗುವುದು ಎಂದು ಮಾಹಿತಿ ನೀಡಿದರು.
ಇದುವರೆಗೆ ಬೀದಿನಾಯಿಗಳ ನಿಯಂತ್ರಣಕ್ಕೆ ಟೆಂಡರ್ ಕರೆದಿದ್ದು, ಟೆಂಡರ್‌ದಾರರು ಭಾಗವಹಿಸದ ಪರಿಣಾಮ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಆ. ೧೧ಕ್ಕೆ ಟೆಂಡರ್ ಪ್ರಕ್ರಿಯೆ ಅಂತಿಮಗೊಳಿಸಿ ಕಾರ್ಯಾದೇಶ ನೀಡಿ ಶಸ್ತçಚಿಕಿತ್ಸೆಗೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಬಿಡಾಡಿ ದನಗಳ ನಿಯಂತ್ರಣಕ್ಕೆ ನಗರಸಭೆಯಿಂದ ಅಗತ್ಯ ಕ್ರಮ ಕೈಗೊಂಡಿದ್ದು, ಕಾಮಧೇನು ಗೋಶಾಲೆಗೆ ಟೆಂಡರ್ ನೀಡಲಾಗಿದೆ. ಬಿಡಾಡಿ ದನಗಳ ಸಾಕಾಣೆದಾರರಿಗೆ ನಗರಸಭೆಯಿಂದ ನೋಟೀಸ್ ನೀಡಿದ್ದು, ಸ್ಪಂದಿಸದಿದ್ದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಸಿ.ಎನ್.ಮೀನಾನಾಗರಾಜ್, ಜಿಪಂ ಸಿಇಒ ಎಚ್.ಎಸ್.ಕೀರ್ತನ, ಪರಿಸರ ಅಭಿಯಂತರರಾದ ತೇಜಸ್ವಿನಿ, ಆರೋಗ್ಯ ನಿರೀಕ್ಷಕರಾದ ನಾಗಪ್ಪ, ರಂಗಪ್ಪ, ಇಂಜಿನಿಯರ್ ಲೋಕೇಶ್, ಪಶುಸಂಗೋಪನಾ ಇಲಾಖೆಯ ಉಪನಿರ್ದೇಶಕ ಮೋಹನ್ ಕುಮಾರ್, ಪ್ರಾಣಿ ದಯಾ ಸಂಘದ ನಳಿನಾ ಡಿಸಾ ಮತ್ತಿತರರಿದ್ದರು.