ಬಾಗಲಕೋಟೆ: ಮೂರನೇ ದಿನ ತೀವ್ರ ಸ್ವರೂಪ ಪಡೆದುಕೊಂಡರುವ ಸಂತ್ರಸ್ತರ ಹೋರಾಟ ಗುರುವಾರ ಬೆಳಗ್ಗೆ ಬೀಳಗಿ ಕ್ರಾಸ ಬಳಿ ರಾಷ್ಟ್ರೀಯ ಹೆದ್ದಾರಿ ತಡೆದರು. ಸರ್ಕಾರ ಸ್ಪಂದಿಸದ ಹಿನ್ನೆಲೆ ಆಕ್ರೋಶಗೊಂಡ ಸಂತಸ್ತರು ಬೀಳಗಿ ಕ್ರಾಸ್ ಬಳಿ ಹುಬ್ಬಳ್ಳಿ-ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿದರು. ಇದರಿಂದ ಐದು ರಿಂದ ಆರು ಕಿಲೋ ಮೀಟರ್ ವರೆಗೆ ಟ್ರಾಫಿಕ್ ಜಾಮ್ ಆಗಿತ್ತು.