ಜಿಲ್ಲೆ

ಬುದ್ಧ, ಬಸವ, ಅಂಬೇಡ್ಕರ್​ ಜಯಂತಿ ಮೇ 3ರಂದು

ರಮೇಶ ಮೇಳಕುಂದಾ

ಕಲಬುರಗಿ: ನಗರದ ಜಿಡಿಎ ವಸತಿಗೃಹ ಬಡಾವಣೆಯಲ್ಲಿ ಮೇ 3ರಂದು ಬುದ್ಧ, ಬಸವ, ಡಾ.ಬಿ.ಆರ್​.ಅಂಬೇಡ್ಕರ್​ ಜಯಂತಿ ಆಯೋಜಿಸಲಾಗಿದೆ ಎಂದು ಜಿಡಿಎ ಬಡಾವಣೆ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ ಮದಾನಿ ತಿಳಿಸಿದರು. ಬುದ್ಧ, ಬಸವ, ಅಂಬೇಡ್ಕರ್​ ಅವರ ತತ್ವ-ಸಿದ್ಧಾಂತಗಳನ್ನು ಜನರಿಗೆ ತಲುಪಿಸಲು ಜಯಂತ್ಯುತ್ಸವನ್ನು ಅದ್ಧೂರಿಯಾಗಿ ಆಚರಿಸಲಾಗುತ್ತಿದೆ. ಮುಂಡರಗಿ ತೋಂಟದಾರ್ಯ ಮಠದ ಶ್ರೀ ನಿಜಗುಣಪ್ರಭು ತೋಂಟದಾರ್ಯ ಸ್ವಾಮೀಜಿ ಹಾಗೂ ಬೆಂಗಳೂರಿನ ಲುಂಬಿನಿ ಬುದ್ಧವಿಹಾರದ ಭಂತೆ ನಾಗರತ್ನ ಸಾನ್ನಿಧ್ಯ ವಹಿಸಲಿದ್ದಾರೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಸಂಸದ ರಾಧಾಕೃಷ್ಣ ದೊಡ್ಡಮನಿ ಉದ್ಘಾಟಿಸುವರು. ಶಾಸಕ ಅಲ್ಲಮಪ್ರಭು ಪಾಟೀಲ್​ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ. ಅತಿಥಿಯಾಗಿ ಪಾಲಿಕೆ ಸದಸ್ಯೆ ವರ್ಷಾ ಜಾನೆ ಭಾಗವಹಿಸುವರು. ಜಯಂತ್ಯುತ್ಸವ ಸಮಿತಿ ಅಧ್ಯಕ್ಷ ಶಿವಶರಣಪ್ಪ ನಂದಗಿರಿ ಅಧ್ಯಕ್ಷತೆ ವಹಿಸುವರು. ಮಲ್ಲಿಕಾರ್ಜುನ ಮದಾನಿ ಪ್ರಾಸ್ತಾವಿಕ ಮಾತನಾಡಲಿದ್ದಾರೆ ಎಂದು ಹೇಳಿದರು. ಸಮಾರಂಭದ ಸ್ವಾಗತ ಸಮಿತಿ ಅಧ್ಯಕ್ಷ ಶಿವಶರಣಪ್ಪ ನಂದಗಿರಿ, ಮುಂಡಖರಾದ ಸತೀಶಕುಮಾರ ಸಜ್ಜನ, ಅಶೋಕ ತಳಕೇರಿ, ಜಗನ್ನಾಥ ತೇಲ್ಕರ್​ ಇತರರಿದ್ದರು.