ಜಿಲ್ಲೆ

ಬುದ್ಧಿವಾದ ಹೇಳಿದಕ್ಕೆ ಆತ್ಮಹತ್ಯೆ ಮಾಡಿಕೊಂಡ ಯುವಕ

ಬುದ್ಧಿವಾದ ಹೇಳಿದಕ್ಕೆ ಆತ್ಮಹತ್ಯೆ ಮಾಡಿಕೊಂಡ ಯುವಕ

ಚಿಕ್ಕೋಡಿ: ಕಾಲೇಜಿಗೆ ಹೋಗು ಎಂದು ತಂದೆ-ತಾಯಿ ಬುದ್ಧಿವಾದ ಹೇಳಿದ್ದಕ್ಕೆ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿಯ ಜಿಲ್ಲೆಯ ಚಿಕ್ಕೋಡಿಯಲ್ಲಿ ನಡೆದಿದೆ.

ಸಾಗರ ತುಕಾರಾಂ ಕುರಾಡೆ (20) ಆತ್ಮಹತ್ಯೆ ಮಾಡಿಕೊಂಡ ಯುವಕ. ಸದಲಗಾ ಖಾಸಗಿ ಕಾಲೇಜಿನಲ್ಲಿ ಬಿಸಿಎ ಪ್ರಥಮ ವರ್ಷದಲ್ಲಿ ಓದುತ್ತಿದ್ದ ಸಾಗರ ಕೆಲ ದಿನದಿಂದ ಕಾಲೇಜಿಗೆ ಹೋಗದೆ ಅಲೆಯುತ್ತಿದ್ದ. ಇದನ್ನು ಗಮನಿಸಿದ ಪೋಷಕರು ಸರಿಯಾಗಿ ಕಾಲೇಜಿಗೆ ಹೋಗು ಎಂದು ಬುದ್ಧಿವಾದ ಹೇಳಿದ್ದಕ್ಕೆ ಯುವಕ ಮನೆಯ ಪಕ್ಕದ ಜಾಗದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಈ ಕುರಿತು ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.