ಜಿಲ್ಲೆ

ಬೂತ್ ಗೆದ್ದರೆ ಕ್ಷೇತ್ರವನ್ನೇ ಗೆದ್ದಂತೆ

  • ಪಾಂಡವಪುರ: ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೆಲುವಿಗಾಗಿ ಪ್ರತಿಯೊಬ್ಬ ಕಾರ್ಯಕರ್ತ ಶ್ರಮಿಸಬೇಕು ಎಂದು ಕ್ಷೇತ್ರದ ಉಸ್ತುವಾರಿ ಹಾಗೂ ಮನ್‌ಮುಲ್ ನಿರ್ದೇಶಕಿ ರೂಪಾ ತಿಳಿಸಿದರು.
    ಈಗಾಗಲೇ ವಿಜಯ ಸಂಕಲ್ಪ ಅಭಿಯಾನದ ಮೂಲಕ ಪಕ್ಷವನ್ನು ಗಟ್ಟಿ ಮಾಡುವ ಕೆಲಸ ಮಾಡಲಾಗಿದೆ. ಕ್ಷೇತ್ರದ 258 ಬೂತ್‌ಗಳನ್ನು ಸದೃಢಗೊಳಿಸಲಾಗಿದೆ. ಪ್ರತಿ ಬೂತ್ ಮಟ್ಟದಲ್ಲೂ ಮನೆ ಮನೆಗೆ ತೆರಳಿ ಸರ್ಕಾರದ ಸಾಧನೆಗಳನ್ನು ಜನರಿಗೆ ಮನದಟ್ಟು ಮಾಡಿಕೊಡಲಾಗುವುದು. ಬೂತ್ ಗೆದ್ದರೆ ಕ್ಷೇತ್ರವನ್ನೇ ಗೆದ್ದಂತೆ ಎಂಬ ಧಾಟಿಯಲ್ಲಿ ಕಾರ್ಯಕರ್ತರು ಕೆಲಸ ಮಾಡಬೇಕು. ಪಕ್ಷ ನನ್ನ ಮೇಲೆ ನಂಬಿಕೆ ಇಟ್ಟು ಕ್ಷೇತ್ರದ ಪ್ರಭಾರಿ ಜವಾಬ್ದಾರಿಯನ್ನು ವಹಿಸಿದೆ. ಚುನಾವಣೆ ಮುಗಿಯುವವರೆಗೂ ಕ್ಷೇತ್ರದಲ್ಲಿ ಇದ್ದು, ಹಳೇ ಕಾರ್ಯಕರ್ತರು ಮತ್ತು ಹೊಸಬರನ್ನು ಒಗ್ಗೂಡಿಸಿ ಕೆಲಸ ಮಾಡುವ ಮೂಲಕ ಪಕ್ಷದ ಅಭ್ಯರ್ಥಿ ಗೆಲ್ಲಿಸಿಕೊಳ್ಳಲಾಗುವುದು ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು. ಕಿಯೋನಿಕ್ಸ್ ನಿರ್ದೇಶಕ ಎಚ್.ಎನ್.ಮಂಜುನಾಥ್, ತಾಲೂಕು ಅಧ್ಯಕ್ಷ ಎಲ್.ಅಶೋಕ್, ಕಾರ್ಯದರ್ಶಿ ನೀಲನಹಳ್ಳಿ ಧನಂಜಯ, ಜಿಲ್ಲಾ ಕಾರ್ಯದರ್ಶಿಗಳಾದ ಕೆ.ಎಲ್.ಆನಂದ್, ಮಂಗಳಾ ನವೀನ್, ನಗರ ಘಟಕದ ಅಧ್ಯಕ್ಷ ಶ್ರೀನಿವಾಸನಾಯಕ, ಸಂದೇಶ್ ಇತರರು ಇದ್ದರು.