filter: 0; fileterIntensity: 0.0; filterMask: 0; brp_mask:0; brp_del_th:null; brp_del_sen:null; delta:null; module: photo;hw-remosaic: false;touch: (-1.0, -1.0);sceneMode: 8;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 37; 
ಜಿಲ್ಲೆ

ಬೃಹತ್ ಆರೋಗ್ಯ ಮೇಳ ಯಶಸ್ಸಿಗೆ ಶ್ರಮಿಸಿ

ವಿದ್ಯಾ ಶೆಟ್ಟನಗೌಡ್ರ

ಸವದತ್ತಿ: ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಮಾ.೨೩ರಂದು ಬೃಹತ್ ಆರೋಗ್ಯ ಮೇಳ ನಡೆಯುವುದು ಹೆಮ್ಮೆಯ ಸಂಗತಿ. ಎಲ್ಲ ಇಲಾಖೆಗಳು ಅಚ್ಚುಕಟ್ಟಾಗಿ ಕಾರ್ಯನಿರ್ವಹಿಸಬೇಕು ಎಂದು ಶಾಸಕ ವಿಶ್ವಾಸ ವೈದ್ಯ ಸೂಚಿಸಿದರು.

ಇಲ್ಲಿನ ತಾಪಂ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಆರೋಗ್ಯ ಮೇಳದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಪೂರ್ವಭಾವಿ ಸಭೆಯ ಕುರಿತು ಮಾಹಿತಿ ಇದ್ದರೂ ಕೆಲ ಅಧಿಕಾರಿಗಳು ಸಭೆಗೆ ಆಗಮಿಸಿಲ್ಲ. ಅಂಥವರ ಮೇಲೆ ಶಿಸ್ತು ಕ್ರಮ ಜರುಗಿಸಲಾಗುವುದು. ಕಾರ್ಯಕ್ರಮ ಹೆಚ್ಚಿನ ಪ್ರಮಾಣದಲ್ಲಿ ಪ್ರಚಾರ ಆಗಬೇಕು. ಜಿಲ್ಲೆಯ ಶಾಸಕರು ಹಾಗೂ ಸಚಿವರು ಆಗಮಿಸಲಿದ್ದಾರೆ. ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಕ್ರೀಡಾಂಗಣದ ಸ್ವಚ್ಛತೆಗೆ ಪುರಸಭೆ ಕ್ರಮವಹಿಸಬೇಕು. ಗ್ರಾಮೀಣ ಜನರಿಗೆ ಹೆಚ್ಚಿನ ಬಸ್ ಸೌಕರ್ಯ ಒದಗಿಸಬೇಕು. ಅಂಗನವಾಡಿ, ಆಶಾ ಕಾರ್ಯಕರ್ತೆಯರು ಮನೆ ಮನೆಗೆ ಭೇಟಿ ನೀಡಿ ಆರೋಗ್ಯ ಮೇಳದ ಕುರಿತು ಮಾಹಿತಿ ತಲುಪಿಸಬೇಕು ಎಂದರು.

ತಹಸೀಲ್ದಾರ್ ಮಲ್ಲಿಕಾರ್ಜುನ ಹೆಗ್ಗನ್ನವರ ಮಾತನಾಡಿ, ಬೃಹತ್ ಆರೋಗ್ಯ ಮೇಳ ಕುರಿತಾಗಿ ಪಟ್ಟಣದಲ್ಲಿ ಹಾಗೂ ಗ್ರಾಮೀಣ ಭಾಗದಲ್ಲಿ ಧ್ವನಿವರ್ಧಕಗಳ ಮೂಲಕ ಹೆಚ್ಚಿನ ಜಾಗೃತಿ ಮೂಡಿಸಲಾಗುವುದು ಎಂದರು.

ಆರೋಗ್ಯಾಧಿಕಾರಿ ಶ್ರೀಪಾದ ಸಬನೀಸ ಮಾತನಾಡಿ, ಆರೋಗ್ಯ ಮೇಳದಲ್ಲಿ ಹೃದಯ, ಸ್ತ್ರೀರೋಗ, ಮಕ್ಕಳ, ಎಲುಬು ಮತ್ತು ಕೀಲು ತಜ್ಞರು, ಕ್ಯಾನ್ಸರ್, ಮಾನಸಿಕ ರೋಗ, ಮೂತ್ರಪಿಂಡ, ಶಸ್ತ್ರಚಿಕಿತ್ಸೆ, ಕಿವಿ, ಮೂಗು ಮತ್ತು ಗಂಟಲು, ನೇತ್ರ, ಚರ್ಮರೋಗ, ದಂತ, ಶ್ವಾಸಕೋಶ ಸೇರಿ ಹಲವಾರು ತಜ್ಞ ವೈದ್ಯರು ಆಗಮಿಸಲಿದ್ದಾರೆ. ಜನರು ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.

ತಾಪಂ ಇಒ ಆನಂದ ಬಡಕುಂದ್ರಿ, ಯರಗಟ್ಟಿ ತಹಸೀಲ್ದಾರ್ ಎಂ.ವಿ.ಗುಂಡಪ್ಪಗೋಳ, ಬಿಇಒ ಮೋಹನ ದಂಡಿನ, ಪಿಎಸ್‌ಐ ಕೆ.ಎಂ. ಬನ್ನೂರ, ಮುಖ್ಯವೈದ್ಯಾಧಿಕಾರಿ ಎಚ್.ಎಂ. ಮಲ್ಲನಗೌಡ್ರ ಹಾಗೂ ಇಲಾಖೆ ಅಧಿಕಾರಿಗಳು ಇದ್ದರು.