ಜಿಲ್ಲೆ

ಬೃಹತ್‌ ಸಮಾವೇಶಕ್ಕೆ ಕೈ ಸಜ್ಜು: ನಾಳೆ ಬೆಳಗಾವಿಗೆ ಖರ್ಗೆ, ಸಿಎಂ ಸಿದ್ದರಾಮಯ್ಯ ಆಗಮನ

ಬೃಹತ್‌ ಸಮಾವೇಶಕ್ಕೆ ಕೈ ಸಜ್ಜು:

ನಾಳೆ ಬೆಳಗಾವಿಗೆ ಖರ್ಗೆ, ಸಿಎಂ ಸಿದ್ದರಾಮಯ್ಯ ಆಗಮನ

ವಿಜಯವಾಣಿ ಸುದ್ದಿಜಾಲ ಬೆಳಗಾವಿ

ಕೇಂದ್ರ ಸರಕಾರದ ನೀತಿ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್‌ನಿಂದ ಏ.28 ರಂದು ಸಂವಿಧಾನ ಬಚಾವೋ ಕಾಂಗ್ರೆಸ್‌ ಸಮಾವೇಶವನ್ನು ನಗರದ ಸಿಪಿಎಡ್‌ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ.

ಸಮಾವೇಶಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ. ರಣದೀಪ್‌ ಸಿಂಗ್‌ ಸುರ್ಜೇವಾಲಾ, ಸಿಎಂ ಸಿದ್ದರಾಮಯ್ಯ , ಡಿಸಿಎಂ ಡಿ.ಕೆ ಶಿವಕುಮಾರ್, ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜಾರಕೊಹೊಳಿ ಸೇರಿದಂತೆ ಸಚಿವರು, ಶಾಸಕರು ಸೇರಿದಂತೆ ರಾಜ್ಯದ ಘಟಾನುಘಟಿ ನಾಯಕರು ಬೆಳಗಾವಿಗೆ ಆಗಮಿಸಲಿದ್ದಾರೆ.

ಕೇಂದ್ರ ಸರ್ಕಾರದ ವೈಫಲ್ಯ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಬಗ್ಗೆ ದೇಶದ ಜನರಿಗೆ ಮನವರಿಕೆ ಮಾಡಲು ಈ ಸಮಾವೇಶವನ್ನು ‌ಕಾಂಗ್ರೆಸ್‌ ಪಕ್ಷ ಹಮ್ಮಿಕೊಂಡಿದ್ದು, ಸುಮಾರು 25 ಸಾವಿರ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಈ ಬೃಹತ್‌ ಸಮಾವೇಶದಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದ್ದು,ಹೆಚ್ಚಿನ ಪೊಲೀಸ್ ಭದ್ರತೆ ನಿಯೋಜಿಸಲಾಗಿದೆ.