ಕಲಬುರಗಿ: ರಾಷ್ಟಿಯ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಂಸ್ಥೆಯಿಂದ ಅ.೨೦ರಂದು ಬೆಂಗಳೂರಿನ ರಾಜಾಜಿನಗರದ ಕೆಎಲ್‌ಇ ಸಂಸ್ಥೆಯ ಎಸ್.ನಿಜಲಿಂಗಪ್ಪ ಮಹಾವಿದ್ಯಾಲಯದಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ ಎಂದು ಕೌಶಲ ಮಿಷನ್‌ನ ಜಿಲ್ಲಾ ಕೌಶಲಾಭಿವೃದ್ಧಿ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ. ರಾಜ್ಯದ ಎಲ್ಲ ವಲಯಗಳಿಂದ ಸುಮಾರು ೧೦೦ಕ್ಕೂ ಹೆಚ್ಚು ಸಂಸ್ಥೆಗಳು ಭಾಗವಹಿಸುವ ನಿರೀಕ್ಷೆ ಇದೆ. ಆಸಕ್ತರು ಮೇಳದಲ್ಲಿ ಭಾಗವಹಿಸಿ ಸದುಪಯೋಗ ಪಡೆದುಕೊಳ್ಳಬೇಕು.