filter: 0; fileterIntensity: 0.0; filterMask: 0; brp_mask:0; brp_del_th:null; brp_del_sen:null; delta:null; module: photo;hw-remosaic: false;touch: (0.5713495, 0.47103587);sceneMode: 3145728;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 45; 
ಜಿಲ್ಲೆ

ಬೆಂಗಳೂರಿನಲ್ಲಿ ಎಸ್ಸಿ-ಎಸ್ಟಿ ಐಕ್ಯತಾ ಸಮಾವೇಶ 25ಕ್ಕೆ

ಚಿತ್ರದುರ್ಗ: ಅಂಬೇಡ್ಕರ್ ಸ್ವಾಭಿಮಾನಿ ಸೇನೆಯಿಂದ ಬೆಂಗಳೂರಿನ ವಸಂತನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ನ. 25ರ ಬೆಳಗ್ಗೆ 11.30ಕ್ಕೆ ರಾಜಕೀಯ ಜಾಗೃತಿಗಾಗಿ ಎಸ್ಸಿ-ಎಸ್ಟಿ ಐಕ್ಯತಾ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಸೇನೆಯ ಜಿಲ್ಲಾಧ್ಯಕ್ಷ ಕೆ.ರಾಮಚಂದ್ರ ತಿಳಿಸಿದರು.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ದಲಿತ ಸಮುದಾಯದವರಿಗೆ ರಾಜಕೀಯವಾಗಿ ಅನ್ಯಾಯವಾಗಿದೆ.

ಯಾವ ಪಕ್ಷಗಳೂ ಸಿಎಂ ಮಾಡಲು ಮುಂದಾಗುತ್ತಿಲ್ಲ. ಕೇವಲ ಮತಬ್ಯಾಂಕ್ ಆಗಿ ಬಳಸಿಕೊಳ್ಳುತ್ತಿವೆ ಎಂದು ದೂರಿದರು.

ರಾಜ್ಯದಲ್ಲಿ ದಲಿತರ ಮೇಲೆ ದೌರ್ಜನ್ಯ, ಹಲ್ಲೆ, ಅತ್ಯಾಚಾರ ನಡೆಯುತ್ತಿವೆ. ಹಲವೆಡೆ ಪೊಲೀಸ್ ಠಾಣೆಗಳಲ್ಲಿ ದೂರು ಸ್ವೀಕರಿಸಲು ಹಿಂದೇಟು ಹಾಕುತ್ತಾರೆ. ಮತ್ತೊಂದೆಡೆ ಸರ್ಕಾರ ಕಣ್ಮುಚ್ಚಿ ಕುಳಿತಿದೆ. ರಾಜಕೀಯ ಪ್ರಾತಿನಿಧ್ಯ ದೊರೆತರೆ, ಇದಕ್ಕೆ ಕಡಿವಾಣ ಹಾಕಬಹುದು. ಹೀಗಾಗಿ ಜಾಗೃತಿ ಮೂಡಿಸುವ ಸಲುವಾಗಿ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದರು.

ಸಮಾವೇಶಕ್ಕೆ ಸಚಿವರಾದ ಎಚ್.ಸಿ.ಮಹದೇವಪ್ಪ, ಮುನಿಯಪ್ಪ ಸೇರಿ ಅನೇಕ ನಾಯಕರು ಭಾಗವಹಿಸಲಿದ್ದಾರೆ. ಸಮುದಾಯದವರು ಪಾಲ್ಗೊಳ್ಳಲು ಚಿತ್ರದುರ್ಗ ಜಿಲ್ಲೆಯ ಪ್ರತಿ ತಾಲೂಕಿನಿಂದಲೂ ತಲಾ ಒಂದು ಬಸ್ ಸೌಕರ್ಯ ಕಲ್ಪಿಸಲಾಗಿದೆ ಎಂದು ತಿಳಿಸಿದರು.

ಪದಾಧಿಕಾರಿಗಳಾದ ತಿಪ್ಪೇಸ್ವಾಮಿ, ವಿನೋದ್‌ಕುಮಾರ್, ತಿಪ್ಪೇಶ್, ರಾಘವೇಂದ್ರ, ಸಾಧಿಕ್, ಲಕ್ಷ್ಮೀಕಾಂತ ಇತರರಿದ್ದರು.