???????????????????????????????????? 
ಜಿಲ್ಲೆ

ಬೆಂಗಳೂರು ಅಭಿವೃದ್ಧಿಗೆ ಕೆಂಪೇಗೌಡರ ದೂರದೃಷ್ಟಿ ಕಾರಣ

ಲೋಕೇಶ್ ಮನು. ಡಿ

ಹನೂರು: ನಾಡಪ್ರಭು ಕೆಂಪೇಗೌಡರ ದೂರದೃಷ್ಟಿಯ ಫಲವಾಗಿ ಬೆಂಗಳೂರು ಕ್ಷಿಪ್ರಗತಿಯಲ್ಲಿ ಅಭಿವೃದ್ಧಿ ಹೊಂದುತ್ತಿದ್ದು, ವಿಶ್ವವೇ ಗುರುತಿಸುವಂತಾಗಿದೆ. ಇಂಥ ದೂರದೃಷ್ಟಿ ಹೊಂದಿದ ಕೆಂಪೇಗೌಡರ ಆದರ್ಶಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು ಎಂದು ಶಾಸಕ ಎಂ.ಆರ್. ಮಂಜುನಾಥ್ ತಿಳಿಸಿದರು.


ಪಟ್ಟಣದ ಲೋಕೋಪಯೋಗಿ ಅತಿಥಿಗೃಹದ ಸಭಾಂಗಣದಲ್ಲಿ ಮಂಗಳವಾರ ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಆಯೋಜಿಸಿದ್ದ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.
ಕೆಂಪೇಗೌಡರು ಬೆಂಗಳೂರಿನ ನಿರ್ಮಾತೃರಾಗಿದ್ದು, ನಾಡಿನ ಅಭಿವೃದ್ಧಿಯಲ್ಲಿ ಇವರ ಕೊಡುಗೆ ಅಪಾರ. ಬೆಂಗಳೂರು ನಿರ್ಮಾಣ ವೇಳೆ ದೂರದೃಷ್ಟಿಯಿಂದ 4 ದಿಕ್ಕುಗಳಲ್ಲೂ ದ್ವಾರವನ್ನು ನಿರ್ಮಿಸುವುದರ ಜತೆಗೆ ಕೆರೆಕಟ್ಟೆಗಳ ನಿರ್ಮಾಣಕ್ಕೆ ಕಾರಣೀಭೂತರಾಗಿದ್ದಾರೆ. ದೇಗುಲದ ಅಭಿವೃದ್ಧಿಗೂ ಒತ್ತು ನೀಡಿದ್ದಾರೆ. ಜತೆಗೆ ಉತ್ತಮ ಆಡಳಿತಗಾರರಾಗಿದ್ದು, ಇವರ ಕಾಲದಲ್ಲಿ ಹಲವು ಸಾಮಾಜಿಕ ಸುಧಾರಣೆಗಳಾಗಿವೆ ಎಂದರು.


ತಹಸೀಲ್ದಾರ್ ಆನಂದಯ್ಯ ಮಾತನಾಡಿ, ಸರ್ಕಾರದ ಆದೇಶದಂತೆ ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಆಚರಿಸಲಾಗುತ್ತಿದ್ದು, ಮುಂದಿನ ವರ್ಷ ವಿಜೃಂಭಣೆಯಿಂದ ಆಚರಿಸಲಾಗುವುದು ಎಂದು ತಿಳಿಸಿದರು.

ಗ್ರೇಡ್-2 ತಹಸೀಲ್ದಾರ್ ಧನಂಜಯ, ತಾಪಂ ಇಒ ಶ್ರೀನಿವಾಸ್, ಬಿಇಒ ಶಿವರಾಜು, ಉಪನೋಂದಣಾಧಿಕಾರಿ ಉಷಾ, ಕೃಷಿ ಅಧಿಕಾರಿ ರಘುವೀರ್, ತಾಲೂಕು ಆರೋಗ್ಯಾಧಿಕಾರಿ ಡಾ.ಪ್ರಕಾಶ್, ಅಗ್ನಿಶಾಮಕ ಠಾಣಾಧಿಕಾರಿ ಪ್ರಶಾಂತ್‌ನಾಯಕ್, ಪ.ಪಂ. ಮುಖ್ಯಾಧಿಕಾರಿ ಮಹೇಶ್‌ಕುಮಾರ್, ಪಿಡಬ್ಲುೃಡಿ ಎಇಇ ಸದಾಶಿವಮೂರ್ತಿ, ಪ.ಪಂ. ಸದಸ್ಯ ಆನಂದ್, ಮೈಮುಲ್ ನಿರ್ದೇಶಕ ಮಹದೇವಪ್ರಸಾದ್, ಸಮುದಾಯದ ಮುಖಂಡರು, ಕಂದಾಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಇದ್ದರು.