ಜಿಲ್ಲೆ

ಬೆಂಗಳೂರು ಚರಿತ್ರೆ ಮಕ್ಕಳು ತಿಳಿಯಲಿ

ಚಿತ್ರದುರ್ಗ: ಕರ್ನಾಟಕದ ರಾಜಧಾನಿ ಬೆಂಗಳೂರು ನಿರ್ಮಾಣದಲ್ಲಿ ನಾಡಪ್ರಭು ಕೆಂಪೇಗೌಡರ ಅಹರ್ನಿಶಿ ದುಡಿಮೆ ಇದ್ದು, ಈ ನಗರ ನಿರ್ಮಾಣದ ರೋಚಕ ಚರಿತ್ರೆಯನ್ನು ಮಕ್ಕಳು ತಿಳಿದುಕೊಳ್ಳಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ಎಂ.ಗುರುನಾಥ ಹೇಳಿದರು.

ನಗರದ ರೋಟರಿ ಶಾಲಾ ಭವನದಲ್ಲಿ ಗುರುವಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಶಿಕ್ಷಣ ಇಲಾಖೆ ಸಹಯೋಗದಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿ ಪ್ರಯುಕ್ತ ಶಾಲಾ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ವಿವಿಧ ಸಾಂಸ್ಕೃತಿಕ ಸ್ಪರ್ಧಾ ಕಾರ‌್ಯಕ್ರಮ ಉದ್ಘಾಟಿಸಿ ಮಾತನಾಡಿ ದರು.

ಸಿಲಿಕಾನ್ ಸಿಟಿ ಬೆಂಗಳೂರು ಪ್ರಸ್ತುತ ಕೋಟ್ಯಂತರ ಜನರಿಗೆ ಬದುಕು ಕೊಟ್ಟಿದೆ. ಮಕ್ಕಳಲ್ಲಿ ಸಾಂಸ್ಕೃತಿಕ ಪ್ರಜ್ಞೆ ಮೂಡಿಸಬೇಕು. ನಾಡು-ನುಡಿಗೆ ಶ್ರಮಿಸಿದ ಮಹನೀಯರ ಜೀವನ, ಆದರ್ಶ, ಕೊಡುಗೆಗಳನ್ನು ಮಕ್ಕಳಿಗೆ ತಿಳಿಸಿಕೊಡುವ ನಿಟ್ಟಿನಲ್ಲಿ ರಾಜ್ಯಸರ್ಕಾರ ಹಲವು ಕಾರ‌್ಯಕ್ರಮಗಳನ್ನು ಹಮ್ಮಿ ಕೊಂಡಿದೆ ಎಂದರು.

ಬಿಇಒ ಎಸ್.ನಾಗಭೂಷಣ್, ಶಿಕ್ಷಣ ಇಲಾಖೆ ಕ್ಷೇತ್ರ ಸಮನ್ವಯಾಧಿಕಾರಿ ಇ.ಸಂಪತ್ ಕುಮಾರ್ ಮಾತನಾಡಿದರು.

ಕೆಂಪೇಗೌಡರ ಜಯಂತಿ ಪ್ರಯುಕ್ತ ವಿದ್ಯಾರ್ಥಿಗಳಿಗೆ ಭಾಷಣ, ಪ್ರಬಂಧ, ಚಿತ್ರರಚನೆ ಹಾಗೂ ಆಶುಭಾಷಣ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.