ಜಿಲ್ಲೆ

ಬೆಂಬಲ ಬೆಲೆಯಡಿ ಹೆಸರುಕಾಳು ಖರೀದಿ

ಚಿತ್ರದುರ್ಗ: ರಾಜ್ಯ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಹೆಸರು ಕಾಳು ಖರೀದಿಗೆ ರಾಜ್ಯ ಸಹಕಾರ ಮಾರಾಟ ಮಹಾಮಂಡಳದಿಂದ ರೈತ ಉತ್ಪಾದಕ ಸಹಕಾರಿ ಸಂಘಗಳನ್ನು ಗುರುತಿಸಲಾಗಿದೆ. ಹೊಸದುರ್ಗ ತಾಲೂಕಿನ ಶ್ರೀರಾಂಪುರ ಪಿಎಸಿಎಸ್ ಹಾಗೂ ಕಂಗುವಳ್ಳಿ ಎಫ್‌ಪಿಒ, ಹಿರಿಯೂರು-ಐಮಂಗಲ ಪಿಎಸಿಎಸ್, ಚಿತ್ರದುರ್ಗ-ತುರುವನೂರು ಎಫ್‌ಪಿಒ ಹಾಗೂ ಮೊಳಕಾಲ್ಮೂರು ತಾಲೂಕಿನ ರಾಂಪುರ ಟಿಎಪಿಸಿಎಂಎಸ್ ಕೇಂದ್ರಗಳಲ್ಲಿ ಹೆಸರು ಕಾಳು ಖರೀದಿ ನೋಂದಣಿಗೆ ಅವಕಾಶವಿದೆ. ಪ್ರತಿ ರೈತರಿಂದ ಎಕರೆಗೆ 3 ಕ್ವಿಂಟಾಲ್‌ನಂತೆ ಗರಿಷ್ಠ 15 ಕ್ವಿಂಟಾಲ್ ಹೆಸರು ಕಾಳು ಖರೀದಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.