ಹಾಸನ: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಆಡಳಿತ ಬಂದ ದಿನದಿಂದಲೂ, ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿ ರೈತರ ಮತ್ತು ಜನಸಾಮಾನ್ಯರಿಗೆ ಗಾಯದ ಮೇಲೆ ಬರೆ ಎಳೆಯುತ್ತಿದ್ದಾರೆ ಎಂದು ಆರೋಪಿಸಿ ಬಿಜೆಪಿ ರೈತ ಮೋರ್ಚ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಪ್ರತಿಭಟನಾಕಾರರು ಹಾಲಿನ ಕ್ಯಾನ್, ವಿದ್ಯುತ್ ಮೀಟರ್ ಬೋರ್ಡ್ ಮತ್ತು ಧನ ಕರುಗಳನ್ನ ಹಿಡಿದುಕೊಂಡು ಜಿಲ್ಲಾಧಿಕಾರಿಗಳ ಕಚೇರಿಗೆ ಆಗಮಿಸಿ ಸರ್ಕಾರ ವಿರುದ್ಧ ಘೋಷಣೆ ಘೋಷಣೆ ಕೂಗಿದರು. ಮುಖ್ಯಮಂತ್ರಿಗಳು ಜನರಿಗೆ ಸುಳ್ಳು ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂದು, ಈಗ ಜನರನ್ನ ವಂಚಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಹಾಲಿನ ದರವನ್ನು ಹೆಚ್ಚಿಗೆ ಮಾಡುವ ಮೂಲಕ ಜನಸಾಮಾನ್ಯರಿಗೆ ತೊಂದರೆ ಉಂಟು ಮಾಡುತ್ತಿದ್ದಾರೆ. ಅದೇ ರೀತಿ ಪೆಟ್ರೋಲ್, ಡೀಸೆಲ್, ಹಾಗೂ ಪಂಪ್‌ಸೇಟ್‌ಗಳಿಗೆ ಉಪಯೋಗಿಸುವಂತಹ ಟ್ರನ್ಸ್‌ಪರ್ಮರ್‌ಗಳ ಬೆಲೆ ಗಗನಕ್ಕೇರಿದೆ. ಜನರ ಪರವಾಗಿ ಕೆಲಸ ಮಾಡಬೇಕಾಗಿದ್ದ ಸರ್ಕಾರ ಜನ ವಿರೋಧಿ ನೀತಿಯನ್ನ ಅನುಸರಿಸುತ್ತಿದೆ ಎಂದು ಕಿಡಿಕಾರಿದರು.
ಬಿಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ರೈತರಿಗೆ ಹಾಲಿನ ಪ್ರೋತ್ಸಾಹ ಧನವನ್ನ ನೀಡುತ್ತಿದ್ದರು. ಆ ಹಣ ಇನ್ನೂ ಬಿಡುಗಡೆಯಾಗಿಲ್ಲ. ಅಲ್ಲದೆ, ಎಲ್ಲಾ ಇಲಾಖೆಯಲ್ಲಿ ಕೂಡ ಭ್ರಷ್ಟಾಚಾರ ನಡೆಯುತ್ತಿದೆ. ಈ ಹಿಂದೆ ಬಿಜೆಪಿ ಸರ್ಕಾರ ಆಡಳಿತ ಆಡಳಿತ ನಡೆಸುತ್ತಿದ್ದ ಸಂದರ್ಭದಲ್ಲಿ ಭ್ರಷ್ಟಾಚಾರ ನಡೆದಿದೆ. ಎಂದು ಸುಳ್ಳು ಹೇಳಿಕೊಂಡು ಪ್ರತಿಭಟನೆ ನಡೆಸಿದರು. ಆದರೆ, ಈಗ ಹಗರಣಗಳ ಸರಮಾಲೆ ಇದ್ದರೂ, ಕೂಡ ಮುಖ್ಯಮಂತ್ರಿಗಳು ಮೌನ ವಹಿಸಿದ್ದಾರೆ ಎಂದು ದೂರಿದರು.
ವಾಲ್ಮೀಕಿ ನಿಗಮದಲ್ಲಿ ಇದ್ದಂತಹ 187 ಕೋಟಿ ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಿದ್ದಾರೆ. ಈ ಎಲ್ಲಾ ಆರೋಪಗಳ ಬಗ್ಗೆ ಸೂಕ್ತ ತನಿಖೆ ನಡೆಸಬೇಕು. ಮುಖ್ಯಮಂತ್ರಿಗಳು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಅಗ್ರಹಿಸಿದರು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಕ್ಕೆ ಮೀಸಲಿದ್ದ ಅನುದಾನವನ್ನ ವಾಪಸ್ ಪಡೆದುಕೊಂಡಿದ್ದಾರೆ. ರೈತರ ಜಮೀನಿಗೆ ಪಹಣಿಯ ಬೆಲೆ 10 ರಿಂದ 40 ರೂಪಾಯಿಗೆ ಏರಿಕೆಯಾಗಿದೆ. ಅಲ್ಲದೆ ಜಮೀನಿನ ಮುದ್ರಾಂಕ ಶುಲ್ಕ ಶೇಕಡ 30ರಷ್ಟು ಏರಿಕೆ ಮಾಡಿಕೊಂಡಿದ್ದಾರೆ. ಇದರಿಂದ ರೈತರು ಮತ್ತು ಜನಸಾಮಾನ್ಯರಿಗೆ ತೀವ್ರ ತೊಂದರೆ ಉಂಟಾಗುತ್ತಿದೆ. ತಕ್ಷಣವೇ ಎಲ್ಲಾ ಬೆಲೆ ಏರಿಕೆಗಳನ್ನ ಕಡಿಮೆ ಮಾಡಬೇಕು ಇಲ್ಲವಾದರೆ ಮುಂದಿನ ದಿನಗಳಲ್ಲಿ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳೋದಾಗಿ ಎಚ್ಚರಿಸಿದರೂ.
ಪ್ರತಿಭಟನೆಯಲ್ಲಿ ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಬಿ.ಎಚ್. ನಾರಾಯಣಗೌಡ, ಬಿಜೆಪಿ ಪ್ರಧಾನ ಕಾರ್ಯದರ್ಶಿ ಅಮಿತ್ ಶೆಟ್ಟಿ, ಮುಖಂಡರಾದ ರಕ್ಷಿತ್, ಪ್ರೀತಿ ವರ್ಧನ್, ವಿಜಯಲಕ್ಷೀ, ಗಿರೀಶ್, ಶಕುನಿಗೌಡ, ಪಾಪಣ್ಣ, ನಟರಾಜ ಇತರರು ಇದ್ದರು.