ಜಿಲ್ಲೆ

ಬೆಲೆ ಏರಿಕೆಗೆ ಕಾಂಗ್ರೆಸ್ ಖಂಡನೆ

ಹುಬ್ಬಳ್ಳಿ: ನಿತ್ಯೋಪಯೋಗಿ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ಮಹಾನಗರ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ ಕಾರ್ಯಕರ್ತೆಯರು ಇಲ್ಲಿನ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ರಸ್ತೆ ಮಧ್ಯ ಒಲೆ ಹೂಡಿ, ಅಡುಗೆ ಮಾಡುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಶುಕ್ರವಾರ ಪ್ರತಿಭಟನೆ ನಡೆಸಿದರು. ಉಳ್ಳಾಗಡ್ಡಿ, ಬದನೆಕಾಯಿ ಇತರ ತರಕಾರಿಗಳ ಮಾಲೆ ಧರಿಸಿದ್ದ ಕಾರ್ಯಕರ್ತೆಯರು, ಕೇಂದ್ರ ಸರ್ಕಾರ ವಿರುದ್ಧ ಘೋಷಣೆ ಕೂಗಿದರು. ಅಡುಗೆ ಸಿಲಿಂಡರ್, ಪೆಟ್ರೋಲ್, ಡೀಸೆಲ್, ಉಳ್ಳಾಗಡ್ಡಿ, ಔಷಧ ಮತ್ತಿತರ ವಸ್ತುಗಳ ದರ ಏರಿಕೆಯಿಂದ ಜನರು ಜೀವನ ನಡೆಸುವುದು ಕಷ್ಟವಾಗಿದೆ. ಬೆಲೆ ಏರಿಕೆ ನಿಯಂತ್ರಿಸುವಲ್ಲಿ ವಿಫಲವಾದ ಬಿಜೆಪಿ ನೇತೃತ್ವದ ಎನ್​ಡಿಎ ಸರ್ಕಾರ ಅಧಿಕಾರದಿಂದ ಕೆಳಗಿಳಿಯುವಂತೆ ಒತ್ತಾಯಿಸಿದರು. ಸಮಿತಿ ಅಧ್ಯಕ್ಷೆ ದೀಪಾ ಗೌರಿ, ಜಯಲಕ್ಷ್ಮೀ ದೊಡ್ಡಮನಿ, ಭಾರತಿ ಬದ್ದಿ, ನಿರ್ಮಲಾ ಮಾನೆ, ಅಕ್ಕಮ್ಮ ಕಂಬಳಿ ಇತರರಿದ್ದರು.