ಕಲಬುರಗಿ: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಿರುವ ರಾಜ್ಯ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ನಗರದಲ್ಲಿ ಭಾರತೀಯ ಜನತಾ ಪಕ್ಷದಿಂದ ಗುರುವಾರ ಹಮ್ಮಿಕೊಂಡ ಪ್ರತಿಭಟನೆ ವೇಳೆ ಜಿಲ್ಲಾಧಿಕಾರಿ ಕಚೇರಿಯತ್ತ ಸಾಗಿದ ಪ್ರತಿ ಪಕ್ಷ ನಾಯಕ ಆರ್.ಅಶೋಕ ಸೇರಿದಂತೆ ಬಿಜೆಪಿ ಮುಖಂಡರನ್ನು ಪೊಲೀಸರು ಬಂಧಿಸಿದರು.
ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ಮಂಗಳವಾರ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ನಡೆಸಿ, ಎತ್ತಿನ ಬಂಡಿಯಲ್ಲಿ ಜಿಲ್ಲಾಧಿಕಾರಿ ಕಚೇರಿಯತ್ತ ಸಾಗುವ ಮಾರ್ಗ ಮಧ್ಯೆ ಪ್ರತಿಭಟನಾಕಾರರನ್ನು ತಡೆದ ಪೊಲೀಸರು ಆರ್.ಅಶೋಕ ಸೇರಿದಂತೆ ವಿಧಾನ ಪರಿಷತ್ ಸದಸ್ಯರು, ಮುಖಂಡರನ್ನು ಬಂಧಿಸಿ, ಕರೆದುಕೊಂಡು ಹೋದರು.
ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಿಸಿದ ರಾಜ್ಯ ಸರ್ಕಾರದ ವಿರುದ್ಧ ನೂರಾರು ಬಿಜೆಪಿ ಕಾರ್ಯಕರ್ತರು ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಸುಮಾರು ಒಂದು ಗಂಟೆ ಸರ್ದಾರ್ ವಲ್ಲಭಬಾಯಿ ಪಟೇಲ್ ವೃತ್ತದಲ್ಲಿ ಸಂಚಾರ ಸ್ಥಗಿತವಾಗಿತ್ತು.
ವಿಧಾನ ಪರಿಷತ್ ಸದಸ್ಯರಾದ ಬಿ.ಜಿ.ಪಾಟೀಲ್, ಶಶೀಲ ನಮೋಶಿ, ಬಿಜೆಪಿ ಜಿಲ್ಲಾಧ್ಯಕ್ಷ ಶಿವರಾಜ ಪಾಟೀಲ್ ರz್ದÉÃವಾಡಗಿ, ಮಾಜಿ ಶಾಸಕರಾದ ಸುಭಾಷ ಗುತ್ತೇದಾರ್, ದತ್ತಾತ್ರೇಯ ಪಾಟೀಲ್ ರೇವೂರ, ಮಾಜಿ ಸಚಿವ ಬಾಬುರಾವ ಚವ್ಹಾಣ್, ಮೇಯರ್ ವಿಶಾಲ ದರ್ಗಿ, ಉಪ ಮೇಯರ್ ಶಿವಾನಂದ ಪಿಸ್ತಿ, ಪ್ರಮುಖರಾದ ಅಮರನಾಥ ಪಾಟೀಲ್, ಗಿರಿರಾಜ ಯಳಮೇಲಿ, ಶಶಿಕಾಂತ ಟೆಂಗಳಿ, ಶರಣಪ್ಪ ತಳವಾರ, ಅವ್ವಣ್ಣ ಮ್ಯಾಕೇರಿ, ಶೋಭಾ ಭಾಣಿ, ಭಾಗೀರಥಿ ಗುನ್ನಾಪುರ, ರಾಜು ವಾಡೇಕರ್, ಗಂಗಪ್ಪಗೌಡ ಪಾಟೀಲ್ ಬೋಧನ, ಮಹಾದೇವ ಬೆಳಮಗಿ, ಶಿವಯೋಗಿ ನಾಗನಹಳ್ಳಿ, ಮಹೇಶ ಚವ್ಹಾಣ್, ಶಾಂತಕುಮಾರ ಖೇಮಜಿ, ನಾಗರಾಜ ಮಹಾಗಾಂವಕರ್, ಸಚಿನ್ ಯಲ್ಲೇರಿ, ವಿಜಯಲಕ್ಷಿö್ಮÃ ಗೊಬ್ಬುರಕರ್, ಸವಿತಾ ಪಾಟೀಲ್, ಮಲ್ಲಿಕಾರ್ಜುನ ಓಕಳಿ, ರವಿ ರಾಠೋಡ್ ಇತರರಿದ್ದರು.