ಕೆ.ಆರ್.ಸಾಗರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಅಜೀಂ ಪ್ರೇಮ್‌ಜಿ ಫೌಂಡೇಷನ್ ಸಹಯೋಗದಲ್ಲಿ ಮಕ್ಕಳ ದಿನಾಚರಣೆ ಅಂಗವಾಗಿ ಬೆಳಗೊಳ ಸರ್ಕಾರಿ ಶಾಲೆ ಆವರಣದಲ್ಲಿ ಬಾಲ ಮೇಳ ಕಾರ್ಯಕ್ರಮವನ್ನು ಗುರುವಾರ ಹಮ್ಮಿಕೊಳ್ಳಲಾಗಿತ್ತು.
ಬೆಳಗೊಳ ಗ್ರಾಪಂ ಅಧ್ಯಕ್ಷ ಪುಟ್ಟರಾಜು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಬಾಲ್ಯದಲ್ಲಿ ಮಕ್ಕಳ ಕಲಿಕೆಗೆ ಅಂಗನವಾಡಿಗಳ ಪಾತ್ರ ಮಹತ್ವದಾಗಿದೆ. ಕಾರ್ಯಕರ್ತೆಯರು ಪುಟ್ಟ ಮಕ್ಕಳಿಗೆ ತಾಯಿ ರೀತಿಯಲ್ಲಿ ಕಲಿಕೆ ಹಾಗೂ ಪೋಷಣೆ ಮಾಡುತ್ತಾರೆ. ಅವರ ಶ್ರಮ ಮೆಚ್ಚುವಂತಹದ್ದು ಎಂದರು.
ಗ್ರಾಪಂ ಮಾಜಿ ಅಧ್ಯಕ್ಷ ಬಿ.ವಿ.ಸುರೇಶ್ ಮಾತನಾಡಿ, ಸರ್ಕಾರಿ ಇಲಾಖೆಯೊಂದಿಗೆ ಖಾಸಗಿ ಸಂಸ್ಥೆ ಈ ರೀತಿ ಕಾರ್ಯಕ್ರಮ ನಡೆಸುತ್ತಿರುವುದು ಸಂತೋಷದ ವಿಷಯ ಎಂದರು.
ವಸ್ತುಪ್ರದರ್ಶನಕ್ಕೆ ಸಿಡಿಪಿಒ ಕುಮಾರಸ್ವಾಮಿ ಚಾಲನೆ ನೀಡಿ ಮಾತನಾಡಿ, ಗ್ರಾಮದ ಅಂಗನವಾಡಿಯಲ್ಲಿ ಸಿಗುವ ಸೌಲಭ್ಯಗಳನ್ನು ಮಹಿಳೆಯರು ಸಮರ್ಪಕವಾಗಿ ಬಳಸಿಕೊಳ್ಳಿ ಎಂದು ಸಲಹೆ ನೀಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಿಲ್ಲಾ ಉಪನಿರ್ದೇಶಕ ರಾಜಮೂರ್ತಿ ಮಾತನಾಡಿ, ಮಕ್ಕಳಿಗೆ ಬಾಲ್ಯದಲ್ಲಿ ಪೌಷ್ಟಿಕ ಆಹಾರ ನೀಡುವುದು ಅಗತ್ಯ ಎಂದು ಹೇಳಿದರು.
ಬೆಳಗೊಳ ಹೋಬಳಿ ಅಂಗನವಾಡಿ ಮೇಲ್ವಿಚಾರಕಿ ಪುಷ್ಪಾವತಿ, ಬೆಳಗೊಳ ಗ್ರಾಪಂ ಸದಸ್ಯರಾದ ಅರವಿಂದ, ರವಿಕುಮಾರ್, ಪ್ರೌಢಶಾಲೆ ಪ್ರಭಾರ ಮುಖ್ಯ ಶಿಕ್ಷಕಿ ರೂಪಾ, ಲಕ್ಷ್ಮಣೇಗೌಡ, ಅಜೀಂ ಪ್ರೇಮ್ ಜಿ ಫೌಂಡೇಷನ್ ಸಂಯೋಜಕರಾದ ಶಶಿಧರ್, ರವಿಕುಮಾರ್, ಚೇತನ್, ಮಾನಸಾ ಇದ್ದರು.