ಜಿಲ್ಲೆ

ಬೆಳೆ ನಷ್ಟ ಪರಿಹಾರ ಬಿಡುಗಡೆಗೆ ಒತ್ತಾಯಿಸಿ ರೈತರ ಪ್ರತಿಭಟನೆ


ಚಿತ್ರದುರ್ಗ: ಬೆಳೆ ನಷ್ಟ ಪರಿಹಾರ ಬಿಡುಗಡೆಗೆ ಒತ್ತಾಯಿಸಿ ರೈತ ಸಂಘದ ಸದಸ್ಯರು ಜಿಲ್ಲಾಧಕಾರಿ ಕಚೇರಿ ಬಳಿ ಶನಿವಾರ ಪ್ರತಿಭಟನೆ ನಡೆಸಿದರು. ಚಿತ್ರದುರ್ಗ ಬರಪೀಡಿತವೆಂದು ಘೋಷಿಸಲಾಗಿದೆ. ಆದರೆ ಈವರೆಗೂ ಬೆಳೆ ವಿಮೆ ಹಾಗೂ ಬೆಳೆನಷ್ಟ ಪರಿಹಾರವನ್ನು ಬಿಡುಗಡೆ ಮಾಡದೆ ಕೇಂದ್ರ ಮತ್ತು ರಾಜ್ಯಸರ್ಕಾರಗಳು ರೈತರನ್ನು ಮತ್ತಷ್ಟು ಸಂಕಷ್ಟಕ್ಕೆ ದೂಡುತ್ತಿವೆ. ಆದ್ದರಿಂದ ಕೂಡಲೇ ಪರಿಹಾರ ಬಿಡುಗಡೆಗೆ ಸರ್ಕಾರಗಳು ಕ್ರಮ ವಹಿಸಬೇಕು.
ಜಿಲ್ಲೆಯಲ್ಲಿ ಬರ ಪರಿಹಾರ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳ ಬೇಕು. ಕೃಷಿ ಪಂಪ್‌ಸೆಟ್‌ಗಳಿಗೆ ರೈತರೇ ಸ್ವಂತ ಖರ್ಚಿನಲ್ಲಿ ವಿದ್ಯುತ್ ಸಂ ಪರ್ಕ ಕಲ್ಪಿಸಿಕೊಳ್ಳ ಬೇಕೆಂಬ ಆದೇಶ ಹಿಂಪಡೆಯಬೇಕು. ಪ್ರತಿ ತಾಲೂಕಿನಲ್ಲಿ ಗೋಶಾಲೆಗಳ ಆರಂಭ, ಶುದ್ಧ ಕುಡಿಯುವ ನೀರು ಸರಬ ರಾಜಿಗೆ ಅಗತ್ಯಕ್ರಮ ವಹಿಸಬೇಕು. ಸಾಲ ವಸೂಲಿ ಸ್ಥಗಿಗೊಳಿಸಿ, ಕೃಷಿ ಸಾಲಗಳನ್ನು ಮನ್ನಾ ಮಾಡಬೇಕೆಂದು ರೈತರು ರಾಜ್ಯಸರ್ಕಾರವನ್ನು ಒತ್ತಾಯಿಸಿದರು.
ರಾಜ್ಯರೈತ ಸಂಘದ ಹಿರಿಯ ಉಪಾಧ್ಯಕ್ಷ ಕೆ.ಪಿ.ಭೂತಯ್ಯ, ಹಂಪಯ್ಯನಮಾಳಿಗೆ ಧನಂಜಯ, ಕೆ.ಸಿ.ಹೂರಕೇರಪ್ಪ, ಹಂಪಣ್ಣ, ಬೇಡ ರೆಡ್ಡಿಹಳ್ಳಿ ಬಸವರೆಡ್ಡಿ, ತಿಮ್ಮಣ್ಣ, ಶಶಿಕಲಾ, ಮಲ್ಲಿಕಾರ್ಜನ್, ಗಂಗಾಧರಪ್ಪ, ಸುರೇಶ್, ರಾಮಚಂದ್ರಪ್ಪ, ರಾಜಣ್ಣ, ಎಸ್.ನಿತ್ಯಶ್ರೀ ಮತ್ತಿತರ ರು ಪ್ರತಿಭಟನೆಯಲ್ಲಿ ಇದ್ದರು.

ಚಿತ್ರದುರ್ಗ: