ಜಿಲ್ಲೆ

ಬೆಳೆ ಹಾನಿ ವಿವರ ಪ್ರಕಟ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ

ಚಾಮರಾಜನಗರ: 2024-25ನೇ ಸಾಲಿನ ಮುಂಗಾರು ಹಂಗಾಮಿನಲಿ ಅತಿವೃಷ್ಟಿಯಿಂದ ತಾಲೂಕಿನಾದ್ಯಂತ ಆಗಿರುವ ಬೆಳೆಹಾನಿ ವಿವರವನ್ನು ಪ್ರಕಟಿಸಲಾಗಿದ್ದು ಈ ಸಂಬಂಧ ಆಕ್ಷೇಪಣೆಗಳಿದ್ದಲ್ಲಿ ಸಲ್ಲಿಸಬಹುದಾಗಿದೆ.

2024-215ನೇ ಸಾಲಿನ ಮುಂಗಾರು ಹಂಗಾಮಿನ ಅವಧಿಯಲ್ಲಿ ಅಂದರೆ ದಿನಾಂಕ 01-10-2024 ರಿಂದ 31-10-2024 ವರೆಗೆ ಅತಿವೃಷ್ಠಿಯಿಂದ ಚಾಮರಾಜನಗರ ತಾಲೂಕಿನಾದ್ಯಂತ ಕೃಷಿ ಹಾಗೂ ತೋಟಗಾರಿಕಾ ಬೆಳೆಗಳು ಹಾನಿಯಾಗಿರುತ್ತದೆ. ಹಾನಿಗೊಳಗಾದ ಬೆಳೆಗಳಿಗೆ ಎಸ್.ಡಿ.ಅರ್.ಎಫ್/ಎನ್.ಡಿ.ಆರ್.ಎಫ್ ಮಾರ್ಗಸೂಚಿಗಳ ಪ್ರಕಾರ ಪರಿಹಾರ ಪಾವತಿ ಮಾಡುವ ಸಂಬಂಧ ಕಂದಾಯ, ಕೃಷಿ ಹಾಗೂ ತೋಟಗಾರಿಕೆ ಇಲಾಖೆ ವತಿಯಿಂದು ಜಂಟಿ ಸಮೀಕ್ಷೆ ಕೈಗೊಳ್ಳಲಾಗಿದೆ.

ಜಂಟಿ ಸಮೀಕ್ಷೆಯಂತೆ ಬೆಳೆ ಹಾನಿ ವಿವರವನ್ನು ನಿಗದಿತ ನಮೂನೆಯಲ್ಲಿ ತಹಶೀಲ್ದಾರ್ ಕಚೇರಿ, ಕೃಷಿ, ತೋಟಗಾರಿಕರ ಇಲಾಖೆ, ಗ್ರಾಮ ಪಂಚಾಯಿತಿ, ರೈತ ಸಂಪರ್ಕ ಕೇಂದ್ರಗಳಲ್ಲಿ ಹಾಗೂ ಜಿಲ್ಲಾ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಈ ಸಂಬಂಧ ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಸಂಬಂಧಿಸಿದ ತಹಶೀಲ್ದಾರ್, ಕೃಷಿ, ತೋಟಗಾರಿಕೆ, ಸಹಾಯಕ ನಿರ್ದೇಶಕರ ಕಚೇರಿಗೆ 7 ದಿವಸಗಳೊಳಗೆ ಸಲ್ಲಿಸುವಂತೆ ಚಾಮರಾಜನಗರ ತಾಲೂಕು ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.