ಕಕ್ಕಬ್ಬೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಏರ್ಪಡಿಸಿದ್ದ ಕಾಫಿ ಮಂಡಳಿ ಹಾಗೂ ಬೆಳೆಗಾರರ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕಾಫಿ ಮಂಡಳಿಯ ಉಪ ನಿರ್ದೇಶಕ ಡಾ.ಚಂದ್ರಶೇಖರ್ ಮಾತನಾಡಿದರು. ಅಜಿತ್ ಕುಮಾರ್ ರಾವತ್, ಮಂಜುನಾಥ್ ರೆಡ್ಡಿ ಮತ್ತಿತರರಿದ್ದರು. 
ಜಿಲ್ಲೆ

ಬೆಳೆಗಾರರಿಗೆ ಕಾಫಿ ಗಿಡಗಳ ನಿರ್ವಹಣೆ ತರಬೇತಿ

ನಾಪೋಕ್ಲು: ಸಮೀಪದ ಕಕ್ಕಬ್ಬೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಸೋಮವಾರ ಕಾಫಿ ಮಂಡಳಿ ಹಾಗೂ ಬೆಳೆಗಾರರೊಂದಿಗೆ ಸಂವಾದ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

ಬೆಳೆಗಾರರಿಗೆ ಮತ್ತು ಕಾರ್ಮಿಕರಿಗೆ ಕಾಫಿ ಗಿಡಗಳ ನಿರ್ವಹಣೆ ಕುರಿತು ತರಬೇತಿ ಹಾಗೂ ವಿವಿಧ ವಿಷಯಗಳ ಕುರಿತು ಕಾಫಿ ಮಂಡಳಿ ಉಪ ನಿರ್ದೇಶಕ ಡಾ.ಚಂದ್ರಶೇಖರ್ ಕಿರು ಚಿತ್ರಪ್ರದರ್ಶನದ ಮೂಲಕ ಮಾಹಿತಿ ನೀಡಿದರು. ಕಾಫಿ ಮಂಡಳಿಯಿಂದ ರೈತರಿಗೆ ಸಿಗುವ ಸೌಲಭ್ಯಗಳು, ಕಾಫಿ ತೋಟದ ನಿರ್ವಹಣೆ, ಮಣ್ಣು ಪರೀಕ್ಷೆ ಬಗ್ಗೆ ಸಮಗ್ರ ಮಾಹಿತಿ ನೀಡಿದರು.

ಕಾಫಿ ಮಂಡಳಿ ಅಧಿಕಾರಿಗಳಾದ ಅಜಿತ್ ಕುಮಾರ್ ರಾವತ್, ಚಟ್ಟಳ್ಳಿ ಕಾಫಿ ಸಂಶೋಧನಾ ಕೇಂದ್ರದ ಮಂಜುನಾಥ್ ರೆಡ್ಡಿ ಬೆಳಗಾರರ ಸಮಸ್ಯೆ ಬಗ್ಗೆ ಅಧಿಕಾರಿಗಳಿಗೆ ಮನವರಿಕೆ ಮಾಡಿಕೊಟ್ಟರು.

ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಕಲ್ಯಾಟಂಡ ರಘು ತಮ್ಮಯ್ಯ, ಗ್ರಾಮ ಪಂಚಾಯಿತಿ ಅಧ್ಯಕ್ಷ ಸಂಪನ್ನ ಅಯ್ಯಪ್ಪ, ಪಾಂಡಂಡ ನರೇಶ್, ಬಡಕಡ ಸುರೇಶ್ ಬೆಳ್ಯಪ್ಪ, ಕಕ್ಕಬ್ಬೆ ವ್ಯಾಪ್ತಿಯ ಬೆಳೆಗಾರರು ಭಾಗವಹಿಸಿದ್ದರು.