ಮಂಗಳೂರು: ಸುಳ್ಯ ತಾಲೂಕಿನ ಬೆಳ್ಳಾರೆಯ ಉದ್ಯಮಿ ಸತ್ಯನಾರಾಯಣ ಕೋಡಿಬೈಲು ಪುತ್ತೂರಿನಲ್ಲಿ ಸೋಮವಾರ ಬೆಳಗ್ಗೆ ನಡೆದ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ಪುತ್ತೂರು ಬೈಪಾಸ್ ರಸ್ತೆಯಲ್ಲಿ ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಿದ್ದಾಗ ಎದುರಿನಿಂದ ಬಂದ ಲಾರಿ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಗಂಭೀರ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಬೆಳ್ಳಾರೆಯಲ್ಲಿ ಕೃಷಿ ಯಂತ್ರೋಪಕರಣಗಳ ಮಾರಾಟ ಮಳಿಗೆ ಕೋಡಿಬೈಲ್ ಏಜೆನ್ಸೀಸ್ ಮೂಲಕ ಕೃಷಿಕರಿಗೆ ಬೇಕಾದ ಕೃಷಿ ಪರಿಕರಗಳನ್ನು ಒದಗಿಸುತ್ತಿದ್ದರು. ಸಂಘ ಸಂಸ್ಥೆಗಳಲ್ಲಿ ಸಕ್ರೀಯರಾಗಿದ್ದರು. ಹಿಂದೂ ಸಂಘಟನೆಯಲ್ಲೂ ಗುರುತಿಸಿಕೊಂಡಿದ್ದರು. ಅವರ ನಿಧನ ಸುದ್ದಿ ತಿಳಿದು ಬೆಳ್ಳಾರೆ, ಸುಳ್ಯ ಪರಿಸರದ ಜನ ದಿಗ್ಭ್ರಮೆಗೊಂಡಿದ್ದಾರೆ.