ಜಿಲ್ಲೆ

ಬೇಡಿಕೆಗಳ ಬಗ್ಗೆ ವಿಧಾನ ಪರಿಷತ್ತಿನಲ್ಲಿ ಪ್ರಸ್ತಾಪ

ಎಸ್.ಎರ್ರಿಸ್ವಾಮಿ

ಬಳ್ಳಾರಿ : ಇಲ್ಲಿನ ಜಿಪಂ ಕಚೇರಿಯ ಮುಂಭಾಗದಲ್ಲಿ ವಿವಿಧ ಬೇಡಿಕೆಗಳಿಗೆ ಈಡೇರಿಕೆಗೆ ಒತ್ತಾಯಿಸಿ ಅನಿರ್ಧಿಷ್ಟಾವಧಿ ಹೋರಾಟ ನಡೆಸುತ್ತಿರುವ ಕರ್ನಾಟಕ ಗ್ರಾಮೀಣಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಎಲ್ಲ ವೃಂದ ಸಂಘಗಳ ಹಾಗೂ ಗ್ರಾಪಂ ಸದಸ್ಯರ ಪ್ರತಿಭಟನೆ ಸ್ಥಳಕ್ಕೆ ವಿಧಾನಪರಿಷತ್ ಸದಸ್ಯ ವೈ. ಎಂ. ಸತೀಶ್ ಬುಧವಾರ ಭೇಟಿ ನೀಡಿ ಬೇಡಿಕೆಗಳ ಈಡೇರಿಕೆಗೆ ವಿಧಾನಪರಿಷತ್ತಿನಲ್ಲಿ ವಿಷಯವನ್ನು ಪ್ರಸ್ತಾಪ ಮಾಡುವುದಾಗಿ ಭರವಸೆ ನೀಡಿದರು.