ಜಿಲ್ಲೆ

ಬೇಲೂರು -ಬಿಕ್ಕೋಡು ರಸ್ತೆ ದುರಸ್ಥಿಗೆ ಆಗ್ರಹ

ಬೇಲೂರು: ಬೇಲೂರು -ಬಿಕ್ಕೋಡು ರಸ್ತೆ ದುರಸ್ಥಿಗೆ ಆಗ್ರಹಿಸಿ ಸನ್ಯಾಸಿಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪ್ರೇಮ ಮತ್ತು ಕೆಲ ಸದಸ್ಯರು ಸನ್ಯಾಸಿಹಳ್ಳಿ ಗ್ರಾಮದ ಸಮೀಪದ ರಸ್ತೆಯಲ್ಲೆ ಶಾಸಕರ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿ ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು.


ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪ್ರೇಮ ಮಾತನಾಡಿ, ನಮ್ಮ ಗ್ರಾಮದ ಮೂಲಕ ಹಾದು ಹೋಗಿರುವ ರಸ್ತೆ ಸಂಪೂರ್ಣವಾಗಿ ಗುಂಡಿ ಬಿದ್ದಿದ್ದು, ನಮ್ಮ ಗ್ರಾಮದ ಮೂಲಕ ಹಾದು ಹೋಗಿರುವ ರಸ್ತೆ ಸಂಪೂರ್ಣವಾಗಿ ಗುಂಡಿ ಬಿದ್ದಿದ್ದು, ಸಾರ್ವಜನಿಕರು ಓಡಾಡದಂತ್ತಾಗಿದೆ. ಈ ಬಗ್ಗೆ ಅಧಿಕಾರಿಗಳು ಮತ್ತು ಶಾಸಕರ ಗಮನಕ್ಕೆ ತಮದರೂ ಪ್ರಯೋಜನವಾಗಿಲ್ಲ. ತಕ್ಷಣವೇ ಈ ರಸ್ತೆ ದುರಸ್ಥಿಗೆ ಮುಂದಾಗಬೇಕು ಎಂದು ಉತ್ತಾಯಿಸಿದರು.


ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಲಿ ಸದಸ್ಯ ಶಿವೇಗೌಡ ಮಾತನಾಡಿ, ನಮ್ಮ ಗ್ರಾಮದಿಂದ ಬಿಕ್ಕೋಡುವರೆಗಿನ ರಸ್ತೆಯಂತೂ ಎಲ್ಲೆಂದರಲ್ಲಿ ಮಂಡಿಯುದ್ದ ಗುಂಡಿ ಬಿದ್ದಿದ್ದು, ವಾಹನಗಳು ಓಡಾಡದಂತ್ತಾಗಿವೆ. ಸಣ್ಣಪುಟ್ಟ ಬೈಕ್ ಮತ್ತು ಇತರೆ ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳಲ್ಲಿ ಸಂಚರಿಸುವಾಗ ಬಿದ್ದು ಗಾಯಗೊಂಡಿರುವ ಘಟನೆಗಳು ಹೆಚ್ಚಾಗಿ ನಡೆಯುತಿದ್ದು, ಶಾಸಕರು ಕ್ಷೇತ್ರದ ಅಭಿವೃದ್ಧಿ ಅಷ್ಟು ಹಣ ತಂದಿದ್ದೇನೆ ಎನ್ನುತ್ತಾರೆ. ಆದರೆ ಇಲ್ಲಿ ರಸ್ತೆಗಳು ನೋಡಿದರೆ ಎಲ್ಲ ಗುಂಡಿ ಬಿದ್ದಿವೆ. ಆದ್ದರಿಂದ ಶಾಸಕೆಉ ಈ ರಸ್ತೆ ಬಗ್ಗೆ ಗಮನ ಹರಿಸಿ ತಕ್ಷಣವೇ ದುರಸ್ಥಿ ಮಾಡಿಸಲು ಮುಂದಾಗಬೇಕು ಎಂದು ಆಗ್ರಹಿಸಿದರು.


ಪ್ರತಿಭಟನೆಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಾದ ದಿನೇಶ, ಮೋಹನ್ ಕುಮಾರ್, ಗ್ರಾಮಸ್ಥರಾದ ಪುಟ್ಟಸ್ವಾಮಿ, ನಂದೀಶ್, ಮಲ್ಲೇಶ್, ರಾಮು, ಕೇಶವಮೂರ್ತಿ ಸೇರಿದಂತೆ ಇತರರಿದ್ದರು.