ಜಿಲ್ಲೆ

ಬೈಕ್ ಡಿಕ್ಕಿಯಾಗಿ ನಾಲ್ವರಿಗೆ ಗಾಯ

ಕೊಳ್ಳೇಗಾಲ: ತಾಲೂಕಿನ ಚೆಲುವನಹಳ್ಳಿ ಗ್ರಾಮದ ಬಳಿ ಪಾದಚಾರಿಗಳಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ.

ಸತ್ತೇಗಾಲ ಹ್ಯಾಂಡ್ ಪೋಸ್ಟ್ ಗ್ರಾಮದ ಬೈಕ್ ಸವಾರ ರಮೇಶ್ ಹಾಗೂ ಪಾದಚಾರಿಗಳಾದ ಚೆಲುವನಹಳ್ಳಿ ಗ್ರಾಮದ ರೇವಮ್ಮ, ಕಿನಕಹಳ್ಳಿ ಬಸವಣ್ಣ ಹಾಗೂ ಗೀತಾ ಗಾಯಗೊಂಡವರು. ಇವರು ಸರಗೂರು ಗ್ರಾಮದಲ್ಲಿ ನಡೆಯುತ್ತಿದ್ದ ಮದುವೆಗೆ ಹೋಗಿ ವಾಪಸ್ ಚೆಲುವನಹಳ್ಳಿ ಕಡೆಗೆ ತೆರಳುವಾಗ ಹಿಂಬದಿಯಿಂದ ಬಂದ ಬೈಕ್ ಡಿಕ್ಕಿ ಹೊಡೆದಿದೆ. ಬೈಕ್ ಸವಾರ ರಮೇಶ್‌ರನಿಗೂ ಪೆಟ್ಟಾಗಿದ್ದು. ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಕರೆತಂದು ಚಿಕಿತ್ಸೆಗೆ ದಾಖಲಿಸಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ರಮೇಶ್‌ನನ್ನು ಚಾ.ನಗರ ಆಸ್ಪತ್ರೆಗೆ ಕಳುಹಿಸಲಾಗಿದೆ.

ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.