ಜಿಲ್ಲೆ

ಬೈಕ್ ಸವಾರನಿಗೆ ಗಾಯ

ಬೈಲಕುಪ್ಪೆ: ಇಲ್ಲಿನ ನವಿಲೂರು ಗೇಟ್ ಸಮೀಪ ಬಿ.ಎಂ.ರಸ್ತೆಯಲ್ಲಿ ಶುಕ್ರವಾರ ರಾತ್ರಿ ಖಾಸಗಿ ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಸವಾರ ಗಾಯಗೊಂಡಿದ್ದಾರೆ.

ಪಿರಿಯಾಪಟ್ಟಣ ತಾಲೂಕಿನ ಹುಣಸವಾಡಿ ಗ್ರಾಮದ ಗೋವಿಂದೇಗೌಡ ಎಂಬುವರ ಮಗ ಸುನೀಲ್ (30) ಗಾಯಗೊಂಡವರು. ಇವರು ಕುಶಾಲನಗರದಿಂದ ಬೈಕ್‌ನಲ್ಲಿ ಪಿರಿಯಾಪಟ್ಟಣದ ಕಡೆಗೆ ತೆರಳುತ್ತಿದ್ದರು. ಪಿರಿಯಾಪಟ್ಟಣದಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಗಾಯಗೊಂಡಿದ್ದ ಸುನೀಲ್‌ರನ್ನು ಪಿರಿಯಾಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿದೆ. ಬೈಲಕುಪ್ಪೆ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಚಾಲಕನ ಸಮೇತ ಖಾಸಗಿ ಬಸನ್ನು ವಶಕ್ಕೆ ಪಡೆದಿದ್ದಾರೆ.

ಫೋಟೋ 01 ಬೈಕ್ ಸವಾರನಿಗೆ ಡಿಕ್ಕಿ ಹೊಡೆದ ಖಾಸಗಿ ಬಸ್ ಪೊಲೀಸ್ ಠಾಣೆಯ ವಶದಲ್ಲಿರುವುದು.