ಜಿಲ್ಲೆ

ಬೈಕ್‌ಗಳ ಮುಖಾಮುಖಿ ಡಿಕ್ಕಿ, ಓರ್ವ ಸಾವು

ಹಾಸನ: ಎರಡು ಬೈಕ್‌ಗಳು ಮುಖಾಮುಖಿ ಡಿಕ್ಕಿಯಾಗಿ ಫುಡ್ ಡೆಲಿವರಿ ಬಾಯ್ ಸ್ಥಳದಲ್ಲೇ ಮೃತಪಟ್ಟು ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಗರ ಹೊರವಲಯದ ಬಿಎಂ ರಸ್ತೆಯಲ್ಲಿ ಗವೇನಹಳ್ಳಿ ಕ್ರಾಸ್ ಬಳಿ ನಡೆದಿದೆ.

ನಗರದ ಎಸ್‌ಬಿಎಂ ಲೇಔಟ್‌ನ ಶರಾವತಿ ಬಡಾವಣೆ ನಿವಾಸಿ ಸತೀಶ್ (40 ವರ್ಷ) ಮೃತ ವ್ಯಕ್ತಿ.

ಅವರು ನೆನ್ನೆ ರಾತ್ರಿ 11ಗಂಟೆ ಸುಮಾರಿನಲ್ಲಿ ಫುಡ್ ಡೆಲಿವರಿ ಮಾಡಲು ನಗರದ ಕಡೆಯಿಂದ ಬಂದು ಗೆಂಡೆಗಟ್ಟೆಗೆ ಹೋಗುವ ರಸ್ತೆ ಬಳಿ ರಾಷ್ಟ್ರೀಯ ಹೆದ್ದಾರಿಗೆ ತಿರುವು ತೆಗೆದುಕೊಳ್ಳುವಾಗ ಬೆಂಗಳೂರು ಕಡೆಯಿಂದ ಬಂದ ಮತ್ತೊಂದು ಬೈಕ್ ಡಿಕ್ಕಿ ಹೊಡೆದಿದೆ. ಇದರಿಂದ ಕೆಳಗೆ ಬಿದ್ದ ಶರತ್ ತಲೆಗೆ ತೀವ್ರ ಪೆಟ್ಟಾಗಿದೆ. ಹೆಲ್ಮೆಟ್ ಧರಿಸದ ಕಾರಣ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮತ್ತೊಂದು ಬೈಕ್ ಸವಾರ ಗಾಯಗೊಂಡಿದ್ದು ಹಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಾಸನ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.