ಶನಿವಾರಸಂತೆ: ಕೊಡ್ಲಿಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರ ವತಿಯಿಂದ ಬ್ಯಾಡಗೊಟ್ಟ ಗ್ರಾಮ ಪಂಚಾಯಿತಿ ಸಹಭಾಗಿತ್ವದಲ್ಲಿ ಬ್ಯಾಡಗೊಟ್ಟ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ಗುರುವಾರ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.
ಬ್ಯಾಡಗೊಟ್ಟ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೇಣುಕಾ ದೀಪ ಬೆಳಗಿಸಿ ಉದ್ಘಾಟಿಸಿದರು. ಕೊಡಗು ವ್ಯೆದ್ಯಕೀಯ ವಿಜ್ಞಾನ ಸಂಸ್ಥೆಯ ರಕ್ತನಿಧಿ ವಿಭಾಗದ ವ್ಯೆದ್ಯರಾದ ಡಾ. ಸಾಧನ್ಯಾ ಮತ್ತು ಡಾ.ಸಾನ್ಯ, ಸ್ಥಳೀಯ ಸಮುದಾಯ ಆರೋಗ್ಯ ಅಧಿಕಾರಿ ಧರಣೇಶ್ ರಾಜ್ ರಕ್ತದಾನದದ ಮಹತ್ವದ ಕುರಿತು ಮಾತನಾಡಿದರು.
ಶನಿವಾರಸಂತೆ ಪೊಲೀಸ್ ಠಾಣೆಯ ಕೆಲೆ ಸಿಬ್ಬಂದಿ, ಅಂಚೆ ಇಲಾಖೆ ನೌಕರರು, ಕಾಂಗ್ರೆಸ್ ಕಾರ್ಯಕರ್ತರು ರಕ್ತದಾನ ಮಾಡಿದರು.
ಬ್ಯಾಡಗೊಟ್ಟ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ದಾಕ್ಷಾಯಿಣಿ , ಸದಸ್ಯರಾದ ಹನೀಫ್, ಪಾವನ, ಪಿಡಿಒ ಗಿರೀಶ್, ಆಶಾ ಕಾರ್ಯಕರ್ತೆಯರಾದ ಶಾಹಿದಾ , ಚೆನ್ನಾಜಿ, ಶಿಕ್ಷಕಿ ರಿಜ್ವಾನಭಾನು ಹಾಗೂ ರಕ್ತನಿಧಿ ಕೇಂದ್ರದ ಸಿಬ್ಬಂದಿ ಇದ್ದರು.