ಧಾರವಾಡ: ನಗರದ ಕರ್ನಾಟಕ ವಿಶ್ವ ವಿದ್ಯಾಲಯದ ಕ್ರೀಡಾಂಗಣದಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ ತಾಲೂಕು ಮಟ್ಟದ ಷಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಹಂಚಿನಮನಿ ಕಾಲೇಜಿನ ವಿದ್ಯಾರ್ಥಿಗಳ ತಂಡ ಜಯಗಳಿಸಿ ಪ್ರಥಮ ಸ್ಥಾನ ಪಡೆದಿದೆ.
ಕ್ರೀಡಾಪಟುಗಳಾದ ನಿರಂತ್ ಪಾಗಿ, ಅಕ್ಷಯ ಪ್ರಸಾದ, ಸಚ್ಚಿದಾನಂದ ವಿ. ಕೆ., ಕಾರ್ತಿಕ ಎಸ್. ಕೆ ಮತ್ತು ಸಮರ್ಥ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆ ಕಾರ್ಯದರ್ಶಿ ಮನೋಜ ಹಂಚಿನಮನಿ, ಪ್ರಾಂಶುಪಾಲ ರಾಘವೇಂದ್ರ ಹೆಗಡೆ ಹಾಗೂ ದೈಹಿಕ ಶಿಕ್ಷಣ ಶಿಕ್ಷಕ ಅರುಣ ಎಲಿಗಾರ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.