ಗದಗ: ಜಿಲ್ಲೆಯ ಮುಂಡರಗಿ ತಾಲೂಕಿನ ಹಮ್ಮಿಗಿ ಗ್ರಾಮಕ್ಕೆ ತಹಸೀಲ್ದಾರ್ ಶ್ರುತಿ ಮಳ್ಳಪ್ಪಗೌಡರ ಭೇಟಿ ನೀಡಿದ್ದ ಸಂದರ್ಭದಲ್ಲಿ ಗದ್ದೆಯಲ್ಲಿ ಭತ್ತದ ನಾಟಿ ಮಾಡಿದರು. ಒಂದೂವರೆ ಗಂಟೆ ರೈತರೊಂದಿಗೆ ಗದ್ದೆಯಲ್ಲಿ ಭತ್ತದ ನಾಟಿ ಮಾಡುವ ಮೂಲಕ ಸರಳತೆಯನ್ನು ಮೆರೆದು ಗಮನ ಸೆಳೆದರು.