ಈ ಹಿನ್ನೆಲೆಯಲ್ಲಿ ಶೀಘ್ರ ಅನುದಾನ ಬಿಡುಗಡೆಗೆ ಶಿಫಾರಸ್ಸು ಮಾಡುವ ಮೂಲಕ ಬರಪೀಡಿತ ಜಿಲ್ಲೆಗಳ ಜನರ ಹಿತಕಾಯುವಂತೆ ಸಂಸದರು ಷಾ ಅವರಿಗೆ ಮನವಿ ಮಾಡಿದ್ದಾರೆ.
ಅಂದಾಜು 21,473 ಕೋಟಿ ರೂ. ಮೊತ್ತದ ಈ ಯೋಜನೆಗೆ ಕೇಂದ್ರ ಸರ್ಕಾರ 2023-24 ನೇ ಸಾಲಿನ ಬಜೆಟ್‌ನಲ್ಲಿ ಅನುದಾನ ಪ್ರಕಟಿಸಿತ್ತು. ಆದರೆ, ಈವರೆಗೆ ಬಿಡುಗಡೆ ಮಾಡದೇ ಇರುವುದು ಕ್ಷೇತ್ರದ ಜನರಲ್ಲಿ ಅಸಮಧಾನ ಉಂಟುಮಾಡಿದೆ.
ನಾಲ್ಕು ಜಿಲ್ಲೆಗಳ ಬರಪೀಡಿತ ತಾಲೂಕುಗಳ 367 ಕೆರೆಗಳನ್ನು ತುಂಬಿಸುವ ಮೂಲಕ ಅಂತರ್ಜಲ ವೃದ್ಧಿಸುವ ಉದ್ದೇಶವೂ ಇದೆ.
ಯೋಜನೆಗೆ ಕೇಂದ್ರ ಸರ್ಕಾರ ಘೋಷಿಸಿದ್ದ 5300 ರೂ. ಅನುದಾನವನ್ನು ಶೀಘ್ರ ಬಿಡುಗಡೆ ಮಾಡಬೇಕು. ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ತುಮಕೂರು ಜಿಲ್ಲೆಗಳ 2,55,515 ಹೆಕ್ಟೇರ್ ಪ್ರದೇಶಕ್ಕೆ ಸೂಕ್ಷನೀರಾವರಿ ಸೌಲಭ್ಯ ಕಲ್ಪಿಸುವುದು ಈ ಯೋಜನೆ ಉದ್ದೇಶವಾಗಿದೆ.
ಚಿತ್ರದುರ್ಗ: ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರದ ಅನುದಾನ ಶೀಘ್ರ ಬಿಡುಗಡೆಗೆ ಶಿಫಾರಸು ಮಾಡುವಂತೆ ಕೋರಿ ಸಂಸದ ಗೋವಿಂದ ಎಂ. ಕಾರಜೋಳ ಮಂಗಳವಾರ ಹೊಸದಿಲ್ಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.