???????????????????????????????????? 
ಜಿಲ್ಲೆ

ಭಯೋತ್ಪಾದಕರ ದಾಳಿಗೆ ಎಸ್‌ಯುಸಿಐ(ಸಿ) ಖಂಡನೆ

ಚಿತ್ರದುರ್ಗ: ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನು ಗುಂಡಿಕ್ಕಿ ಕೊಂದ ಭಯೋತ್ಪಾದಕರ ದಾಳಿಯನ್ನು ಎಸ್‌ಯುಸಿಐ(ಸಿ) ರಾಜ್ಯ ಕಾರ್ಯದರ್ಶಿ ಕೆ.ಉಮಾ ತೀವ್ರವಾಗಿ ಖಂಡಿಸಿದ್ದಾರೆ.

ನಿಷೇಧಿತ ಲಷ್ಕರ್-ಎ-ತೊಯ್ಬ (ಎಲ್‌ಇಟಿ) ಛಾಯಾ ಸಂಘಟನೆಯಾದ ದಿ ರೆಸಿಸ್ಟೆನ್ಸ್ ಫ್ರಂಟ್ (ಟಿಆರ್‌ಎಫ್) ಕರ್ನಾಟಕದ ಇಬ್ಬರು ಸೇರಿ 28 ಪ್ರವಾಸಿಗರನ್ನು ಹತ್ಯೆ ಮಾಡಿ, ಹತ್ತಾರು ಜನರನ್ನು ಗಾಯಗೊಳಿಸಿರುವುದು ಇಡೀ ದೇಶ ಖಂಡಿಸುವ ದುರ್ಘಟನೆಯಾಗಿದೆ ಎಂದು ಬುಧವಾರ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಭಾರೀ ಪ್ರಮಾಣದ ಮಿಲಿಟರಿ ಸನ್ನದ್ಧತೆ, ಭದ್ರತಾ ಕ್ರಮಗಳನ್ನು ಕೈಗೊಂಡಿದ್ದೇವೆ ಎಂದು ಹೇಳಿಕೊಂಡರೂ, ಜಮ್ಮು ಮತ್ತು ಕಾಶ್ಮೀರದಲ್ಲಿ ಜನಸಾಮಾನ್ಯರ ರಕ್ಷಣೆಯಲ್ಲಿ ಕೇಂದ್ರ ಸರ್ಕಾರದ ವೈಫಲ್ಯವನ್ನು ಈ ಘಟನೆ ಸಾಬೀತುಪಡಿಸುತ್ತದೆ ಎಂದು ದೂರಿದ್ದಾರೆ.

ಮೃತರ ಮತ್ತು ಗಾಯಗೊಂಡವರ ಕುಟುಂಬಗಳಿಗೆ ಸರ್ಕಾರ ಸೂಕ್ತ ಪರಿಹಾರ, ಪುನರ್ವಸತಿ ಕಲ್ಪಿಸಬೇಕು. ಈ ಭೀಕರ ಕುಕೃತ್ಯಕ್ಕೆ ಕಾರಣರಾದ ದುಷ್ಕರ್ಮಿಗಳನ್ನು ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.