ಚಾಮರಾಜನಗರ: ಭಾರತೀಯ ಸೇನೆ ನಡೆಸಿದ ಆಪರೇಷನ್ ಸಿಂಧೂರ ಕಾರ್ಯಾಚರಣೆ ಯಶಸ್ವಿಯಾದ ಹಿನ್ನೆಲೆಯಲ್ಲಿ ಬಿಜೆಪಿ ನಗರ ಮಂಡಲದ ವತಿಯಿಂದ ಶುಕ್ರವಾರ ವಿಶೇಷ ಪೂಜೆ ಸಲ್ಲಿಸಲಾಯಿತು.
ನಗರದ ಶ್ರೀಚಾಮರಾಜೇಶ್ವರಸ್ವಾಮಿ ದೇವಾಲಯಕ್ಕೆ ತೆರಳಿದ ಬಿಜೆಪಿ ಕಾರ್ಯಕರ್ತರು, ವೀರಯೋಧರು, ಪ್ರಧಾನಿ ನರೇಂದ್ರ ಮೋದಿ ಹೆಸರಿನಲ್ಲಿ ಅರ್ಚನೆ ಮಾಡಿಸಿ, ವಿಶೇಷ ಪೂಜೆ ಸಲ್ಲಿಸಲಾಯಿತು.
ಈ ವೇಳೆ ನಗರ ಮಂಡಲ ಅಧ್ಯಕ್ಷ ಶಿವರಾಜ್ ಮಾತನಾಡಿ, ಪಾಕಿಸ್ತಾನಿ ಉಗ್ರರು ಪಹಲ್ಗಾಮ್ನಲ್ಲಿ 26 ಅಮಾಯಕರನ್ನು ಹತ್ಯೆ ಮಾಡಿದ್ದರು. ಇದಕ್ಕೆ ಪ್ರತೀಕಾರವಾಗಿ ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆಸಿ ಉಗ್ರರನ್ನು ಹತ್ಯೆ ಮಾಡಲಾಗಿದೆ. ಪ್ರತಿ ಬಾರಿ ಉಗ್ರರ ದಾಳಿ ಆದಾಗಲೂ ನಮ್ಮ ಭಾರತೀಯ ಸೇನೆ ಅವರಿಗೆ ತಕ್ಕ ಉತ್ತರ ಕೊಟ್ಟಿದೆ. ಇದು ಪುನರಾವರ್ತನೆಯಾಗದಂತೆ ಶಾಶ್ವತ ಕಡಿವಾಣವನ್ನು ಹಾಕಬೇಕು ಎಂದರು.
ನಗರಸಭಾ ಉಪಾಧ್ಯಕ್ಷೆ ಮಮತಾ ಬಾಲಸುಬ್ರಹ್ಮಣ್ಯಂ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಶಿವುವಿರಾಟ್, ನಗರದ ಮಂಡಲ ಪ್ರಧಾನ ಕಾರ್ಯದರ್ಶಿ ಕೂಸಣ್ಣ , ಮಹೇಶ್, ಉಪಾಧ್ಯಕ್ಷೆ ಕುಮುದಾ ಕೇಶವಮೂರ್ತಿ, ಎಸ್ಸಿ ಮೋರ್ಚಾ ಜಿಲ್ಲಾಧ್ಯಕ್ಷ ಚಂದ್ರಶೇಖರ್, ಉಪಾಧ್ಯಕ್ಷ ಬುಲೆಟ್ ಚಂದ್ರು, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಸೂರ್ಯಕುಮಾರ್, ಪ್ರಧಾನ ಕಾರ್ಯದರ್ಶಿ ಆನಂದ್ ಭಗೀರಥ, ಶಿವಣ್ಣ, ಉತ್ತವಳ್ಳಿ ಮಹೇಶ್, ಮಲೆಯೂರು ಕಮಲಮ್ಮ, ಎಂ.ಶೈಲಾ, ವನಜಾಕ್ಷಿ, ಜ್ಯೋತಿ, ಜಯಶ್ರೀ, ಪಾರ್ವತಿ, ಗಾಯಿತ್ರಿ, ರಾಜಮ್ಮ ಇತರರು ಹಾಜರಿದ್ದರು.