ಬೆಂಗಳೂರಿನ ಜನತಾ ಸಮಾಜ ಸೇವಾ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಭರತ ನಾಟ್ಯ ಸ್ಪರ್ಧೆಯಲ್ಲಿ ಪ್ರಶಸ್ತಿ ಪಡೆದ ವಿದ್ಯಾರ್ಥಿನಿ ಕು. ಚಂದ್ರಕಲಾ ಅವರನ್ನು ಹೊಯ್ಸಳ ಪ್ರೌಢಶಾಲೆ ಶಿಕ್ಷಕರು ಅಭಿನಂದಿಸಿದರು. 
ಜಿಲ್ಲೆ

ಭರತ ನಾಟ್ಯದಲ್ಲಿ ಚಂದ್ರಕಲಾಗೆ ಪ್ರಥಮ ಸ್ಥಾನ

Hassan

ಬೇಲೂರು: ಬೆಂಗಳೂರಿನ ಜನತಾ ಸಮಾಜ ಸೇವಾ ಟ್ರಸ್ಟ್‌ನಿಂದ ಆಯೋಜಿಸಿದ್ದ ಭರತ ನಾಟ್ಯ ಸ್ಪರ್ಧೆಯಲ್ಲಿ ಬೇಲೂರಿನ ಹೊಯ್ಸಳ ಪ್ರೌಢಶಾಲೆ ವಿದ್ಯಾರ್ಥಿನಿ ಕು.ಚಂದ್ರಕಲಾ ಪ್ರಥಮ ಸ್ಥಾನಗಳಿಸಿ ಪ್ರಶಸ್ತಿ ಪಡೆದಿದ್ದಾಳೆ.

75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ, ಹಿರಿಯ ಸ್ವಾತಂತ್ರ್ಯ ಹೋರಾಟಗಾರರ ಸ್ಮರಣೆ ಹಾಗೂ ಮಾಜಿ ರಾಷ್ಟ್ರಪತಿ ಎ.ಪಿ.ಜೆ.ಅಬ್ದುಲ್ ಕಲಾಂ ಸ್ಮರಣೆ ಅಂಗವಾಗಿ ಬೆಂಗಳೂರಿನ ಜನತಾ ಸಮಾಜ ಸೇವಾ ಟ್ರಸ್ಟ್ ವತಿಯಿಂದ ಬೆಂಗಳೂರಿನಲ್ಲಿ ಆಯೋಜಿಸಿದ್ದ ವಿವಿಧ ಸಾಂಸ್ಕೃತಿಕ ಹಾಗೂ ಭರತ ನಾಟ್ಯ ಸ್ಪರ್ಧೆಯಲ್ಲಿ ಬೇಲೂರಿನ ಹೊಯ್ಸಳ ಪ್ರೌಢಶಾಲೆ ವಿದ್ಯಾರ್ಥಿನಿ ಕು.ಚಂದ್ರಕಲಾ ಪ್ರಥಮ ಸ್ಥಾನ ಗಳಿಸಿ ಪ್ರಶಸ್ತಿ ಪಡೆದಿ ರುವುದಕ್ಕೆ ಶಾಲೆಯ ದೈಹಿಕ ಶಿಕ್ಷಕ ನಂದೀಶಯ್ಯ ಹಾಗೂ ಶಿಕ್ಷಕಿ ಸುಪ್ರೀತ್ ಶಾಲಾಡಳಿತದ ಪರವಾಗಿ ವಿದ್ಯಾರ್ಥಿನಿ ಚಂದ್ರಕಲಾ ಅವರನ್ನು ಅಭಿನಂದಿಸಿದರು.