ಚಿಕ್ಕಮಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಡಿಸಿ ಮೀನಾ ನಾಗರಾಜ್ ಅಧ್ಯಕ್ಷತೆಯಲ್ಲಿ ಭಾರತ ದರ್ಶನ ಕುರಿತು ವಸ್ತು ಪ್ರದರ್ಶನ ಕಾರ್ಯಕ್ರಮದ ಪೂರ್ವಭಾವಿ ಸಭೆ ನಡೆಯಿತು. 
ಜಿಲ್ಲೆ

ಭಾರತ ದರ್ಶನ-ವಸ್ತು ಪ್ರದರ್ಶನ

ಚಿಕ್ಕಮಗಳೂರು: ಭಾರತ ದರ್ಶನ-ವಸ್ತು ಪ್ರದರ್ಶನ ಕಾರ್ಯಕ್ರಮ ಜ. ೬, ೭ ಮತ್ತು ೮ರಂದು ನಗರದ ಎಂ.ಎಲ್. ಮಂಜಯ್ಯ ಶೆಟ್ಟಿ ನರಸಿಂಹಶೆಟ್ಟಿ ಶಿಕ್ಷಕರ ಶಿಕ್ಷಣ ಚೈತನ್ಯ ಭಾರತಿ ಕಾಲೇಜಿನಲ್ಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಭಾರತ ದರ್ಶನ ಕುರಿತು ವಸ್ತು ಪ್ರದರ್ಶನ ಕಾರ್ಯಕ್ರಮದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಭಾರತದ ಇತಿಹಾಸ, ಸಂಸ್ಕೃತಿ, ಕಲೆ ಮಹಾನ್ ವ್ಯಕ್ತಿಗಳ ವಿಜ್ಞಾನ, ವಾಸ್ತುಶಿಲ್ಪ, ಸ್ವಾತಂತ್ರö್ಯ ಹೋರಾಟಗಾರರ, ಪುರಾತನ ವಸ್ತುಗಳು ಸೇರಿದಂತೆ ಕೀಟಗಳು ಪಶ್ಚಿಮ ಘಟ್ಟಗಳಲ್ಲಿ ಕಾಣಸಿಗುವ ನೂರಕ್ಕೂ ಹೆಚ್ಚು ಕೀಟಗಳ ಪ್ರದರ್ಶನವನ್ನು ವಿದ್ಯಾರ್ಥಿಗಳಿಗೆ ಪರಿಚಯಿಸುವುದು ಮತ್ತು ಅವುಗಳ ಮಹತ್ವದ ಕುರಿತು ವಿದ್ಯಾರ್ಥಿಗಳಲ್ಲಿ ಆಸಕ್ತಿ ಮೂಡಿಸುವುದೇ ವಸ್ತು ಪ್ರದರ್ಶನದ ಉz್ದೆÃಶವಾಗಿದೆ ಎಂದು ಹೇಳಿದರು.

೧೫ ರಿಂದ ೨೦ ಸಾವಿರ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ವಸ್ತು ಪ್ರದರ್ಶನ ವೀಕ್ಷಿಸಲಿದ್ದಾರೆ. ವಿದ್ಯಾರ್ಥಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡುವಂತೆ ಸಂಬAಧಪಟ್ಟ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ ಅವರು, ಕಾರ್ಯಕ್ರಮ ಮೂರು ದಿನಗಳ ಕಾಲ ನಡೆಯುವುದರಿಂದ ವಿದ್ಯಾರ್ಥಿಗಳಿಗೆ ಕೂರಲು ಶಾಮಿಯಾನ ವ್ಯವಸ್ಥೆಯನ್ನು ಹಾಗೂ ಸ್ವಯಂ ಸೇವಕರಿಗೆ ಲಘು ಉಪಹಾರದ ವ್ಯವಸ್ಥೆ ಮಾಡಬೇಕು ಎಂದರು.

ವಸ್ತು ಪ್ರದರ್ಶನದ ಕುರಿತು ನಗರಸಭೆಯ ವಾಹನಗಳಲ್ಲಿ ಧ್ವನಿ ವರ್ಧಕದ ಮೂಲಕ ಪ್ರಚಾರ ಮಾಡಬೇಕು. ವಸ್ತು ಪ್ರದರ್ಶನದ ಸುತ್ತ ಮುತ್ತ ಮೂರು ದಿನಗಳ ಕಾಲ ಸ್ವಚ್ಚತೆಯನ್ನು ಕಾಪಾಡುವಂತೆ ನಗರಸಭೆಯ ಆಯುಕ್ತರಿಗೆ ತಿಳಿಸಿದ ಅವರು, ಈ ಸಂದರ್ಭಗಳಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಇಲಾಖೆಯಿಂದ ಪೊಲೀಸ್ ಬಂದೋಬಸ್ತ್ ಮಾಡಿಸಬೇಕು ಎಂದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ. ಸಿ. ರಮೇಶ್ ಮಾತನಾಡಿ, ವಸ್ತು ಪ್ರದರ್ಶನದಲ್ಲಿ ಪ್ರದರ್ಶನಗೊಳ್ಳುವ ವಸ್ತುಗಳ ಕುರಿತು ಮಾಹಿತಿ ನೀಡಿ ವಸ್ತು ಪ್ರದರ್ಶನ ವೀಕ್ಷಿಸಲು ಸುಮಾರು ೨೦ ಸಾವಿರ ಶಾಲಾ-ಕಾಲೇಜು ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಭಾಗವಹಿಸಲಿದ್ದಾರೆ ಎಂದರು.

ಸಭೆಯಲ್ಲಿ ನಗರಸಭೆ ಆಯುಕ್ತ ಬಿ.ಸಿ. ಬಸವರಾಜು, ಎಂ.ಎಲ್. ಮಂಜಯ್ಯ ಶೆಟ್ಟಿ ನರಸಿಂಹಶೆಟ್ಟಿ ಶಿಕ್ಷಕರ ಶಿಕ್ಷಣ ಚೈತನ್ಯ ಭಾರತಿ ಕಾಲೇಜಿನ ಪ್ರಾಚಾರ್ಯ ಡಾ. ಗಣೇಶ್, ಹಳೆಯ ವಸ್ತುಗಳ ಸಂಗ್ರಹಕ ಅಶೋಕ್ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.