ಎಚ್.ಡಿ.ಕೋಟೆ ಪಟ್ಟಣದ ಬಾಲಕಿಯ ಪ್ರೌಢಶಾಲೆ ಅವರಣದಲ್ಲಿ ಕೋಟಿ ಕಂಠ ಗಾಯನ ಕಾರ್ಯಕ್ರಮ ನಡೆಯಿತು. 
ಜಿಲ್ಲೆ

ಭಾಷಾಭಿಮಾನ ಮೂಡಿಸಲು ಸಹಕಾರಿ

ಎಚ್.ಡಿ.ಕೋಟೆ: ಪಟ್ಟಣದ ಬಾಲಕಿಯರ ಪ್ರೌಢಶಾಲೆ ಆವರಣದಲ್ಲಿ ತಾಲೂಕು ಆಡಳಿತ ಹಾಗೂ ಶಿಕ್ಷಣ ಇಲಾಖೆ ವತಿಯಿಂದ ಶುಕ್ರವಾರ ಕನ್ನಡ ಕೋಟಿ ಕಂಠ ಗಾಯನ ಕಾರ್ಯಕ್ರಮ ನಡೆಯಿತು.

ಕ್ಷೇತ್ರ ಶಿಕ್ಷಣಾಧಿಕಾರಿ ಉದಯಕುಮಾರ್ ಮಾತನಾಡಿ, ಕನ್ನಡ ನಾಡು, ನುಡಿ, ಭಾಷೆ ಅಭಿಮಾನ ಬೆಳೆಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ಸಹಕಾರಿಯಾಗಿದೆ ಎಂದರು.
ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಕನ್ನಡ ಪ್ರಮೋದ ಮಾತನಾಡಿ, 67ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ವಿಶಿಷ್ಟವಾಗಿ ಆಚರಿಸಲು ಸರ್ಕಾರ ಕೋಟಿ ಕಂಠ ಗಾಯನ ಕಾರ್ಯಕ್ರಮ ಏರ್ಪಡಿಸಿರುವುದು ಹೆಮ್ಮೆಯ ವಿಚಾರ ಎಂದರು.

ಇದೇ ಸಂದರ್ಭದಲ್ಲಿ ಬಾಲಕಿಯರ ಪ್ರೌಢಶಾಲಾ ಉಪ ಪ್ರಾಂಶುಪಾಲ ಮಂಜುನಾಥ್ ವಿದ್ಯಾರ್ಥಿಗಳಿಗೆ ಸಂಕಲ್ಪ ವಿಧಿ ಬೋಧಿಸಿದರು. ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಾಜೇಶ್ ಜೆರಾಲ್ಡ್, ಯೋಜನಾಧಿಕಾರಿ ರಂಗಸ್ವಾಮಿ, ಉಪ ತಹಸೀಲ್ದಾರ್ ಮಹೇಶ್, ಬಿಆರ್‌ಸಿ ಕೃಷ್ಣಯ್ಯ, ಬಿಆರ್‌ಪಿ ಮಹದೇವಯ್ಯ, ಕೃಷ್ಣಮೂರ್ತಿ, ಬಾಲಕಿಯರ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಸುದೀಪ್, ವರ್ತಕರ ಸಂಘದ ಅಧ್ಯಕ್ಷ ವಿನಯ್ ಭಜರಂಗಿ, ಪುರಸಭಾ ನಾಮ ನಿರ್ದೇಶನ ಸದಸ್ಯರಾದ ಮಹೇಶ್, ನಂದೀಶ್, ರಾಜು, ಬಸವರಾಜು ಇದ್ದರು.