ಹುಮನಾಬಾದ್: ಪಟ್ಟಣದಲ್ಲಿ ವಿವಿಧ ಇಲಾಖೆ ಅಧಿಕಾರಿಗಳ ತಂಡ ಶನಿವಾರ ಭಿಕ್ಷೆ ಬೇಡುವ ಮತ್ತು ಚಿಂದಿ ಆಯುವ ಮಕ್ಕಳ ರಕ್ಷಣಾ ಕಾರ್ಯಾಚರಣೆ ನಡೆಸಿತು.
ಸೋಮವಾರ ಬೆಳಗ್ಗೆ ೮ ರಿಂದ ೧೦ ಗಂಟೆವರೆಗೆ ಕಾರ್ಯಾಚರಣೆ ನಡೆಸಿ, ಏಳು ಮಕ್ಕಳನ್ನು ರಕ್ಷಿಸಿದ್ದು, ಅದರಲ್ಲಿ ಐವರು ಬಾಲಕರು, ಇಬ್ಬರು ಬಾಲಕಿಯರಿದ್ದರು. ಎಲ್ಲರನ್ನು ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರುಪಡಿಸಿ, ಪಾಲಕರಿಂದ ಮುಚ್ಚಳಿಕೆ ಪತ್ರ ಬರೆಸಿಕೊಂಡು ಶಿಕ್ಷಣ ಇಲಾಖೆ ಸಹಕಾರದೊಂದಿಗೆ ಶಾಲೆಗೆ ಸೇರಿಸಲು ಕ್ರಮ ಕೈಗೊಳ್ಳಲಾಯಿತು.
ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಗುರುರಾಜ ಆದೇಶದ ಮೇರೆಗೆ ತಹಸೀಲ್ದಾರ್ ಕಚೇರಿ, ತಾಪಂ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕಚೇರಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ, ಸಮಾಜ ಕಲ್ಯಾಣ ಇಲಾಖೆ ಶಿಕ್ಷಣ, ಪೊಲೀಸ್, ಕಾರ್ಮಿಕ ಹಾಗೂ ಆರೋಗ್ಯ ಇಲಾಖೆ ಆಶ್ರಯದಲ್ಲಿ ಕಾರ್ಯಾಚರಣೆ ನಡೆಸಲಾಯಿತು.
ಮಕ್ಕಳ ರಕ್ಷಣಾ ಘಟಕದ ಸಮಾಜ ಕಾರ್ಯಕರ್ತ ರವಿರಾಜ ಭಮ್ಮಶೆಟ್ಟಿ, ಸಮಾಜ ಕಲ್ಯಾಣ ಅಧಿಕಾರಿ ನಿಂಗರಾಜ ಅರಸ, ಕಾರ್ಮಿಕ ಅಧಿಕಾರಿ ಗಂಗಾಧರ, ಶಿಶು ಅಭಿವೃದ್ಧಿ ಯೋಜನೆ ಮೇಲ್ವಿಚಾರಕಿ ಹೊನ್ನಮ್ಮ, ತಾಪಂ ವ್ಯವಸ್ಥಾಪಕಿ ವಿಜಯಲಕ್ಷ್ಮೀ, ಅಧಿಕಾರಿಗಳಾದ ವಿಜಯಕುಮಾರ, ಶರಣಕುಮಾರ, ಸಂತೋಷ, ರವಿ ಕೊಡ್ಡಿಕರ್, ಮನೋಹರ ರಾಠೋಡ್, ಖದೀರ್ ಮುಬಿನ, ಗೀತಾ ಇತರರಿದ್ದರ