ಕಲಬುರಗಿ : ಜಿಲ್ಲೆಯ ಎಲ್ಲಡೆ ಹಾಗೂ `ನೆರೆ'ಯ ಮಹಾರಾಷ್ಟç ರಾಜ್ಯದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಜ್ಞರು ಮುನ್ಸೂಚನೆ ನೀಡಿದ್ದಾರೆ. ಈ ಹಿನ್ನಲೆಯಲ್ಲಿ ಭೀಮಾ ಮತ್ತು ಕಾಗಿಣಾ ನದಿಯಲ್ಲಿ ಪ್ರವಾಹ ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ಹೀಗಾಗಿ ತುರ್ತು ಸಂದರ್ಭ ಎದುರಾದಲ್ಲಿ ಜನರನ್ನು ರಕ್ಷಣೆ ಮಾಡಲು ಮತ್ತು ಪರಿಹಾರ ಕಾರ್ಯಗಳನ್ನು ಕೈಗೊಳ್ಳಲು ನೊಡಲ್ ಅಧಿಕಾರಿಗಳನ್ನು ನೇಮಕ ಮಾಡಿ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯಲ್ಲಿ ಪ್ರವಾಹ ಭೀತಿ ಎದುರಾಗಲಿರುವ ಅಫಜಲಪುರ, ಜೇವರ್ಗಿ, ಚಿಂಚೋಳಿ, ಚಿತ್ತಾಪುರ, ಸೇಡಂ, ಶಹಾಬಾದ,ಕಲಬುರಗಿ ತಾಲೂಕಿನ ವಿವಿಧ ಗ್ರಾಮಗಳಿಗೆ ವಿವಿಧ ಇಲಾಖೆಯ ಅಧಿಕಾರಿಗಳನ್ನು ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ ಎಂದು ಕಲಬುರಗಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಅಧ್ಯಕ್ಷರು ಆಗಿರುವ ಡಿಸಿ ಫೌಜಿಯಾ ತರನ್ನುಮ್ ತಿಳಿಸಿದ್ದಾರೆ.
ನೋಡಲ್ ಅಧಿಕಾರಿಗಳಾಗಿ ನೇಮಕಗೊಂಡವರಜ ಸಂಬAಧಪಟ್ಟ ತಾಲೂಕಿನಲ್ಲಿ ಪ್ರವಾಹ ನಿಮಿತ್ತ ಉಂಟಾಗಲಿರುವ ಜನ ಮತ್ತು ಜಾನುವಾರುಗಳ ಸ್ಥಳಾಂತರ ಕುರಿತಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು.ಸಂಬAಧಪಟ್ಟ ತಾಲೂಕಿನಲ್ಲಿ ತೆರೆಯಲಾದ ಪರಿಹಾರ ಕೇಂದ್ರಗಳ ಉಸ್ತುವಾರಿ ನೋಡಿಕೊಳ್ಳಲು ಸೂಚಿಸಿದ್ದಾರೆ