ಬಾಗಲಕೋಟೆ: ಬಾದಾಮಿ ತಾಲೂಕಿನ ನೀರಬೂದಿಹಾಳ ಗ್ರಾಮದಲ್ಲಿ ಎರಡು ದಿನಗಳ ವರೆಗೆ ಹಮ್ಮಿಕೊಂಡಿರುವ ಬಾಗಲಕೋಟೆ ಜಿ¯್ಲÁ ೧೨ನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರ ನೇತೃತ್ವದಲ್ಲಿ ಭುವನೇಶ್ವರಿದೇವಿ ಭಾವಚಿತ್ರದ ಮೆರವಣಿಗೆ ಸಡಗರ-ಸಂಭ್ರಮದಿAದ ಜರುಗಿತು.
ಹಳದಮ್ಮದೇವಿ ದೇವಸ್ಥಾನದಿಂದ ಸಕಲ ಕಲಾ ವಾಧ್ಯಮೇಳಗಳೊಂದಿಗೆ ಸಮ್ಮೇಳನಾಧ್ಯಕ್ಷರು, ಹಿರಿಯ ಸಾಹಿತಿ ಡಾ.ವೈ.ಎಂ.ಯಾಕೊಳ್ಳಿ ದಂಪತಿಗಳ ನೇತೃತ್ವದಲ್ಲಿ ಮೆರವಣಿಗೆ ನಡೆಯಿತು. ಗ್ರಾಮದಲ್ಲಿ ಕನ್ನಡ ಧ್ವಜಗಳು ರಾರಾಜಿಸುತ್ತಿದ್ದವು. ಲಂಬಾಣಿ ಸಾಂಪ್ರದಾಯಿಕ ನೃತ್ಯ, ಡೊಳ್ಳುಕುಣಿತ ಮೆರವಣಿಗೆಯ ಕಳೆ ಹೆಚ್ಚಿಸಿತ್ತು. ನೂರಾರು ಮಹಿಳೆಯರು ಕುಂಭ, ಕಳಸಾರತಿಯೊಂದಿಗೆ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಚಿಕ್ಕಮಕ್ಕಳು ವಿವಿಧ ಕನ್ನಡ ಸಾಹಿತಿಗಳ, ರಾಷ್ಟಭಕ್ತರ ವೇಷಭೂಷಣ ಧರಿಸಿ ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದರು.